ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ.
2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದು, ಈ ಮೂಲಕ ಊಹಾಪೋಹಹಳಿಗೆ ತೆರೆ ಎಳೆದಿದ್ದಾರೆ.
ಶನಿವಾರ ರಾಮನಗರದ ಹಳೇ ಬಸ್‌ ನಿಲ್ದಾಣದಲ್ಲಿ ನಡೆದ ಜೆಡಿಎಸ್‌ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಈ ಘೋಷಣೆ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ತನ್ನ ಬದಲಿಗೆ ನಿಖಿಲ್‌ ಸ್ಪರ್ಧಿಸಲಿದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಆತನ ಮೇಲೆ ಇರಲಿ ಎಂದು ಹೇಳುತ್ತ ಭಾವುಕರಾದರು.
ನನ್ನ ಬಗ್ಗೆ ಅಪಪ್ರಚಾರಗಳನ್ನು ಮಾಡುತ್ತಿದ್ದರು. ಹಾಗಾಗಿ ಇವತ್ತು ಇದನ್ನು ಅಂತಿಮಗೊಳಿಸಬೇಕು ಎಂದು ಇಲ್ಲಿ ಘೋಷಣೆ ಮಾಡಿದ್ದೇನೆ. ನಾನು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ. ನಾನು ದೇವರ ಮುಂದೆ ನಿಂತಾಗ ಕೂಡ ನನ್ನ ಗಂಡ ಮತ್ತು ನನ್ನ ಮಗನಿಗೆ ಒಳ್ಳೆಯದಾಗಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳುತ್ತ ಭಾವೋದ್ವೇಗಕ್ಕೆ ಒಳಗಾದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement