ಡಿ ಕೆ ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದೆ.
ಡಿ.ಕೆ. ಶಿವಕುಮಾರ ಅವರು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ. ಇಂದು, ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ಸಿಬಿಐ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಕೂಡ ಶಿವಕುಮಾರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಶಿವಕುಮಾರ ಅವರು ನ್ಯಾಷನಲ್‌ ಎಜುಕೇಶನ್‌ ಫೌಂಡೇಶನ್‌ ಸಂಸ್ಥೆಯ ಚೇರ್ಮನ್‌ ಆಗಿದ್ದು, ಅವರ ಮಗಳಾದ ಐಶ್ವರ್ಯ ಕಾರ್ಯದರ್ಶಿಯಾಗಿದ್ದಾರೆ.

ಏತನ್ಮಧ್ಯೆ ಸಿಬಿಐ ದಾಳಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ ಅವರು, ‘ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್‌ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಪರಿಶೀಲಿಸಿ ತಹಶೀಲ್ದಾರ್‌ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಎಲ್ಲಾ ಕಡೆಯಿಂದ ನನಗೆ ತೊಂದರೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ನಾನು ತಪ್ಪು ಮಾಡಿಲ್ಲ, ಹೀಗಾಗಿ ಸಿಬಿಐ ದಾಳಿಯಿಂದ ನನಗೆ ಭಯವಿಲ್ಲ, ತಮ್ಮ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಬಿಜೆಪಿ ಉದ್ದೇಶಿತ ದಾಳಿ ಆಯೋಜಿಸಿದ್ದು, ಈ ಬಗ್ಗೆ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement