ಬೆಳಗಾವಿ ಅಧಿವೇಶನ : ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿದಂತೆ ಮಹತ್ವದ ನಾಲ್ಕು ಮಸೂದೆ ಮಂಡನೆಗೆ ತಯಾರಿ

ಬೆಳಗಾವಿ :ಸೋಮವಾರದಿಂದ (ಡಿಸೆಂಬರ್ 19) ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು,. ಮಂಗಳವಾರ (ಡಿಸೆಂಬರ್ 20) 2ನೇ ದಿನದ ಅಧಿವೇಶನದಲ್ಲಿ ಎಸ್​​ಸಿ/ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ (SC/ST Reservation hike Bill) ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿದಂತೆ ಒಟ್ಟು 4 ಮಸೂದೆ ಮಂಡನೆಯಾಗಲಿವೆ.
ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ 6ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್​.ಎನ್. ನಾಗಮೋಹನದಾಸ ನೇತೃತ್ವದ ಆಯೋಗ ಮತ್ತು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ನೇತೃತ್ವದ ಸಮಿತಿಯು ಸಲ್ಲಿಸಿರುವ ವರದಿಯ ಶಿಫಾರಸು ಆಧರಿಸಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದರು ಹಾಗೂ ಅದಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿತ್ತು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement