ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ಸಹಚರ ಜಾಮೀನಿನ ಮೇಲೆ ಬಿಡುಗಡೆ

posted in: ರಾಜ್ಯ | 0

ಮೈಸೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದಂತಚೋರ ವೀರಪ್ಪನ್‌ನ ಸಹಚರ ಜ್ಞಾನಪ್ರಕಾಶ ಮಂಗಳವಾರ ಬೆಳಗ್ಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.
ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 68ರ ಹರೆಯದ ಜ್ಞಾನಪ್ರಕಾಶನನ್ನು ಇಬ್ಬರ ಶ್ಯೂರಿಟಿ ಹಾಗೂ 5 ಲಕ್ಷ ರೂ. ಬಾಂಡ್ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಶ್ವಾಸಕೋಶದ ಕ್ಯಾನ್ಸರ್ (Lung Cancer) ನಿಂದ ಬಳಲುತ್ತಿದ್ದ ಜ್ಞಾನಪ್ರಕಾಶಗೆ ಸುಪ್ರೀಂ ಕೋರ್ಟ್ ನವೆಂಬರ್‌ 26ರಂದು ಮಾನವೀಯತೆ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿತ್ತು.
ಜ್ಞಾನಪ್ರಕಾಶ ಬೆಳಗಾವಿಯ ಹಿಂಡಲಗಾ ಮತ್ತು ನಂತರ ಮೈಸೂರಿನಲ್ಲಿ ಕಂಬಿಗಳ ಹಿಂದೆ 29 ವರ್ಷಗಳನ್ನು ಕಳೆದಿದ್ದಾನೆ. ಒಂದೂವರೆ ವರ್ಷದಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಆತ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಸಂಧಾನಪಾಳ್ಯದವನಾದ ಜ್ಞಾನಪ್ರಕಾಶ, ವೀರಪ್ಪನ್, ಸೈಮನ್, ಬಿಲವೇಂದ್ರನ್ ಮತ್ತು ಮೀಸೆಕಾರ ಮಾದಯ್ಯ ಅವರೊಂದಿಗೆ 1993ರಲ್ಲಿ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದು, ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ 2014 ರಲ್ಲಿ, ಸುಪ್ರೀಂಕೋರ್ಟ್‌ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಿತು.
ಅಕ್ಟೋಬರ್ 18, 2004 ರಂದು ಪೊಲೀಸ್ ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಕೊಲ್ಲಲ್ಪಟ್ಟರೆ, ಸೈಮನ್ ವಿಕ್ಟೋರಿಯಾ ಆಸ್ಪತ್ರೆಯ ಜೈಲು ವಾರ್ಡ್‌ನಲ್ಲಿ ಏಪ್ರಿಲ್ 15, 2018 ರಂದು ಮೃತಪಟ್ಟ ಮತ್ತು ಬಿಲವೇಂದ್ರನ್ ಕೂಡ ಕೆಲವು ವರ್ಷಗಳ ಹಿಂದೆ ನಿಧನರಾದರು ಹೊಂದಿದ. ಜ್ಞಾನಪ್ರಕಾಶ್ ಮತ್ತು ಮಾದಯ್ಯ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಮಂಗಳವಾರ ಜಾಮೀನಿನ ಮೇಲೆ ಜ್ಞಾನಪ್ರಕಾಶ ಬಿಡುಗಡೆಯಾಗಿದ್ದಾನೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement