ಕಾಂಗ್ರೆಸ್ ಅಧ್ಯಕ್ಷರ “ನಾಯಿ” ಹೇಳಿಕೆಗೆ ಗದ್ದಲ : ಕ್ಷಮೆಯಾಚನೆಗೆ ಬಿಜೆಪಿ ಪಟ್ಟು, ನಿರಾಕರಿಸಿದ ಖರ್ಗೆ

ನವದೆಹಲಿ: ಆಡಳಿತಾರೂಢ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಇಂದು, ಮಂಗಳವಾರ ಸಂಸತ್ತಿನಲ್ಲಿ ಭಾರಿ ಗದ್ದಲ ಉಂಟಾಯಿತು.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು “ಭಾರತ್ ತೋಡೋ (ಭಾರತವನ್ನು ವಿಭಜಿಸಿ)” ಎಂದು ಲೇವಡಿ ಮಾಡಿದ್ದಕ್ಕಾಗಿ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಮಲ್ಲುಕಾರ್ಜುನ ಖರ್ಗೆ ಮಾಡಿದ ಕಾಮೆಂಟ್ಈಗ ಸಂಸತ್ತಿನಲ್ಲಿ ಗದ್ದಲಕ್ಕೆ ಕಾರಣವಾಗಿದೆ.
ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ಭಾರತ ಜೋಡೋ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ” ಕಾಂಗ್ರೆಸ್‌ ದೇಶಕ್ಕೆ ಸ್ವಾತಂತ್ರ್ಯವನ್ನು ಗೆದ್ದುಕೊಟ್ಟಿದೆ ಮತ್ತು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು ಎಂದು ಹೇಳಿದರು
ನಿಮ್ಮ ಮನೆಯ ನಾಯಿಯಾದರೂ ದೇಶಕ್ಕಾಗಿ ಸತ್ತಿದೆಯೇ? ಆದರೂ, ಅವರು (ಬಿಜೆಪಿ) ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಮತ್ತು ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ (ರಾಷ್ಟ್ರ ವಿರೋಧಿಗಳು) ಎಂದು ಕರೆಯಲಾಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಚೀನಾದೊಂದಿಗಿನ ಗಡಿ ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಿದ್ದಕ್ಕಾಗಿ ಖರ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು: “ಅವರು (ಬಿಜೆಪಿ ಸರ್ಕಾರ) ಹೊರನೋಟಕ್ಕೆ ಸಿಂಹದಂತೆ ಮಾತನಾಡುತ್ತಾರೆ, ಆದರೆ ಅವರು ಇಲಿಯಂತೆ ವರ್ತಿಸುತ್ತಾರೆ” ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಸಂಸತ್ತಿನಲ್ಲಿ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ  ಬಿಜೆಪಿ, ಈ ಹೇಳಿಕೆ ಬಗ್ಗೆ ಕಾಂಗ್ರೆಸ್‌ ತಕ್ಷಣ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ಅವರು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಮತ್ತು ಸುಳ್ಳು ಹರಡಲು ಪ್ರಯತ್ನಿಸಿದ್ದಾರೆ. ಅಲ್ವಾರ್ ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ನಂತರ ಸದನದಲ್ಲಿ ಗದ್ದಲಕ್ಕೆ ಕಾರಣವಾಗುತ್ತಿದ್ದಂತೆ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ತಿನ ಹೊರಗೆ ಈ ಕಾಮೆಂಟ್ ಮಾಡಲಾಗಿದೆ ಎಂದು ಹೇಳಿದರು.
ದೇಶದ 135 ಕೋಟಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಯಾರೋ ಒಬ್ಬರು ಹೊರಗೆ ಏನೋ ಹೇಳಿರಬಹುದು… ನೀವು ಮಕ್ಕಳಲ್ಲ” ಎಂದು ಹೇಳಿದರು.
ಕ್ಷಮೆಯಾಚನೆಯ ಬೇಡಿಕೆ ಬಗ್ಗೆ ವ್ಯಂಗ್ಯವಾಡಿದ ಖರ್ಗೆ, “ನಾನು ಇಲ್ಲಿ (ರಾಜ್ಯಸಭೆಯಲ್ಲಿ) ಪುನರಾವರ್ತಿಸಿದರೆ, ಈ ಜನರಿಗೆ (ಬಿಜೆಪಿ) ತುಂಬಾ ಕಷ್ಟವಾಗುತ್ತದೆ, ಏಕೆಂದರೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ಷಮೆಯಾಚಿಸಿದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕ್ಷಮೆಯಾಚಿಸಲು ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ‘ಭಾರತ ತೋಡೊ (ವಿಭಜಿತ ಭಾರತ) ಯಾತ್ರೆ’ ನಡೆಸುತ್ತಿದೆ ಎಂದು ಹೇಳಿದರು. ಆಗ ನಾನು ಹೇಳಿದ್ದು ಕಾಂಗ್ರೆಸ್ ಯಾವಾಗಲೂ ಭಾರತ್ ಜೋಡೋ (ಭಾರತವನ್ನು ಒಂದುಗೂಡಿಸುವ) ಮೇಲೆ ಕೆಲಸ ಮಾಡಿದೆ. ಇದಕ್ಕಾಗಿ ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಾಣ ಕೊಟ್ಟರು. ನೀವು ಏನು ಮಾಡಿದ್ದೀರಿ? ದೇಶಕ್ಕಾಗಿ ಯಾರು ತ್ಯಾಗ ಮಾಡಿದ್ದಾರೆಂದು ನಿಮಗೆ ತಿಳಿದಿದೆ ಎಂದು ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ಇದಕ್ಕೆ ತಿರುಗೇಟು ನೀಡಿದ ಪಿಯೂಷ್ ಗೋಯಲ್, “ಅವರಿಗೆ (ಕಾಂಗ್ರೆಸ್) ನಿಮ್ಮ ಇತಿಹಾಸ ನೆನಪಿಲ್ಲ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್‌ನಿಂದಾಗಿ ಜಮ್ಮು ಮತ್ತು ಕಾಶ್ಮೀರ ಯಾವ ಸ್ಥಿತಿಯಲ್ಲಿತ್ತು, ಪಾಕಿಸ್ತಾನದ ಬೆದರಿಕೆ, ಚೀನಾದ ಆಕ್ರಮಣ, ಬಿಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅವಮಾನ ಅವರಿಗೆ ನೆನಪಿಲ್ಲ ಎಂದು ಕಟುಕಿದರು.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement