ಕೆಪಿಟಿಸಿಎಲ್ ಎಇ, ಜೆಇ ನೇಮಕ ಪರೀಕ್ಷೆ ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ-ಸಚಿವ ಸುನೀಲಕುಮಾರ

ಬೆಂಗಳೂರು: ಕೆಪಿಟಿಸಿಎಲ್ (KPTCL) ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲಕುಮಾರ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಇಂದು, ಮಂಗಳವಾರ (ಡಿಸೆಂಬರ್‌ 20) ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ ಅವರು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಕಾಯುತ್ತಿದ್ದು ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದರು,
ಇದಕ್ಕೆ ಉತ್ತರಿಸಿದ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement