ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಹಾಲಕ್ಷ್ಮಿ ಲೇಔಟ್​​​ನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಅಪಾರ್ಟ್​​ಮೆಂಟ್​​ನಲ್ಲಿ ಈ ಘಟನೆ ನಡೆದಿದ್ದು, ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ತಾಯಿ ಯಶೋಧಾ ಅವರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ​, ಮತ್ತೋರ್ವ ಪುತ್ರಿ ಸುಮನ್ ಅವರು ತಾಯಿ ಯಶೋಧಾ ಜೊತೆ ನೆಲೆಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಈ ಅಪಾರ್ಟ್‌ಮೆಂಟ್‌ಗೆ ಬಂದುತಾಯಿ ಮತ್ತು ಇಬ್ಬರು ಮಕ್ಕಳು ವಾಸವಾಗಿದ್ದರು ಎಂದು ಹೇಳಲಾಗಿದೆ.
ಯಶೋಧರಿಗೆ ಸಂಬಂಧಿಕರು ಹಲವು ಬಾರಿ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಈ ಹಿನ್ನಲೆ ಸಂಬಂಧಿಕರು ರಾಜಾಜಿನಗರದಲ್ಲಿರುವ 2ನೇ ಮಗಳಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ನಂತರ ಮನೆ ಬಳಿ ಬಂದಾಗ ಚಪ್ಪಲಿ, ಕಾರ್ ಇರುವುದು ಪತ್ತೆಯಾಗಿದೆ. ಬಳಿಕ ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement