ಹರತಾಳದ ವೇಳೆ ಆದ ನಷ್ಟವನ್ನು ಪಿಎಫ್‌ಐನಿಂದ ವಸೂಲಿ ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ಕೇರಳ ಹೈಕೋರ್ಟ್ ಅಸಮಾಧಾನ

ತಿರುವನಂತಪುರಂ: ಇದೀಗ ನಿಷೇಧವಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ಹರತಾಳದಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ವಸೂಲಾತಿಯಲ್ಲಿನ ವಿಳಂಬದ ಬಗ್ಗೆ ಕೇರಳ ಹೈಕೋರ್ಟ್ ಸೋಮವಾರ, ಡಿಸೆಂಬರ್ 19 ರಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಹಾಗೂ ವಸೂಲಾತಿಯನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ನ್ಯಾಯಮೂರ್ತಿ ಜಯಶಂಕರನ್ ನಂಬಿಯಾರ್ ನೇತೃತ್ವದ ವಿಭಾಗೀಯ ಪೀಠ, ಆಸ್ತಿ ಹಾನಿ ವಿಚಾರವನ್ನು ಸಣ್ಣ ವಿಷಯ ಎಂದು ಪರಿಗಣಿಸಲಾಗುವುದಿಲ್ಲ ಮತ್ತು ಡಿಸೆಂಬರ್ 23 ರಂದು ಹಾಜರಾಗುವಂತೆ ಗೃಹ ಕಾರ್ಯದರ್ಶಿಗೆ ಸಮನ್ಸ್ ನೀಡಿತು.
ಏತನ್ಮಧ್ಯೆ, ರಾಜ್ಯ ಸರ್ಕಾರವು ವಸೂಲಾತಿ ಪ್ರಕ್ರಿಯೆಗೆ ಕನಿಷ್ಠ ಆರು ತಿಂಗಳ ಕಾಲಾವಕಾಶವನ್ನು ಕೋರಿತು, ಅದನ್ನು ನ್ಯಾಯಾಲಯ ತಿರಸ್ಕರಿಸಿತು. ಸೆಪ್ಟೆಂಬರ್‌ನಲ್ಲಿ ರಾಜ್ಯಾದ್ಯಂತ ನಡೆದ ಹರತಾಳದ ಹಿಂಸಾಚಾರದ ಸಂದರ್ಭದಲ್ಲಿ ಆಸ್ತಿ ಹಾನಿಯಿಂದ 86 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರ ನವೆಂಬರ್ 7 ರಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಹಿಂಸಾಚಾರದ ಸಂದರ್ಭದಲ್ಲಿ ಖಾಸಗಿ ವ್ಯಕ್ತಿಗಳಿಂದ 16 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವು ಸಲ್ಲಿಸಿದ್ದು, ಹಿಂಸಾತ್ಮಕ ಹರತಾಳಕ್ಕೆ ಕರೆ ನೀಡಿದವರಿಂದ ನಷ್ಟವನ್ನು ವಸೂಲಿ ಮಾಡಲು ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ಮಾಜಿ ಜಿಲ್ಲಾ ನ್ಯಾಯಾಧೀಶ ಪಿ.ಡಿ.ಶಾರಗಧರನ್ ಅವರನ್ನು ಹಕ್ಕು ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ” ಒಟ್ಟು 724 ಜನರನ್ನು ಬಂಧಿಸಲಾಗಿದೆ, ಎಲ್ಲಾ ಅಪರಾಧಿಗಳನ್ನು ಗುರುತಿಸಲಾಗಿದೆ ಮತ್ತು ಅವರಲ್ಲಿ ಹೆಚ್ಚಿನವರನ್ನು ಬಂಧಿಸಲಾಗಿದೆ” ಎಂದು ರಾಜ್ಯ ಸರ್ಕಾರ ಈ ಹಿಂದೆ ಹೇಳಿತ್ತು.
ಈವರೆಗೆ ರಾಜ್ಯ ಪೊಲೀಸರು ಒಟ್ಟು 361 ಪ್ರಕರಣಗಳನ್ನು ದಾಖಲಿಸಿ 2,674 ಜನರನ್ನು ಬಂಧಿಸಿದೆ. ಈ ಹಿಂದೆ, ಹರತಾಳ ಸಂಬಂಧಿತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಮತ್ತು ರಾಜ್ಯ ಸರ್ಕಾರವು ಅಂದಾಜು ಮಾಡಿದ ಹಾನಿಗೆ ಸಂಬಂಧಿಸಿದಂತೆ ಗೃಹ ಇಲಾಖೆಗೆ 5.2 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ನಿಷೇಧಿತ ಪಿಎಫ್‌ಐ ಮತ್ತು ಅದರ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚಿಸಿತ್ತು.
ಸತಾರ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ, ಪಿಎಫ್‌ಐ ಕಚೇರಿಗಳ ಮೇಲೆ ರಾಷ್ಟ್ರವ್ಯಾಪಿ ದಾಳಿಗಳು ಮತ್ತು ಅದರ ಮುಖಂಡರ ಬಂಧನದ ವಿರುದ್ಧ ಹರತಾಳಕ್ಕೆ ಕರೆ ನೀಡಿದ್ದ ಮತ್ತು ನಂತರ ಪರಾರಿಯಾಗಿದ್ದ. ಪಿಎಫ್‌ಐ ಅನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ, ಗೃಹ ಸಚಿವಾಲಯದ ನಿರ್ಧಾರದ ಹಿನ್ನೆಲೆಯಲ್ಲಿ ಸಂಘಟನೆಯನ್ನು ವಿಸರ್ಜಿಸಲಾಯಿತು ಮತ್ತು ನಂತರ ಆತನನ್ನು ಬಂಧಿಸಲಾಯಿತು ಎಂದು ಕೋರ್ಟ್‌ಗೆ ಸರ್ಕಾರ ಹೇಳಿಕೆ ನೀಡಿತ್ತು.

ಪ್ರಮುಖ ಸುದ್ದಿ :-   ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ...! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement