ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ಹಾಲು ಕುಡಿದ ಕೆಲ ಮಕ್ಕಳು ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿದ್ಯಮಾನ ವರದಿಯಾಗಿದೆ.
ಸಿದ್ದಾಪುರ ತಾಲೂಕಿನ ಕ್ಯಾದಗಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಎಂದಿನಂತೆ ಕ್ಷೀರಭಾಗ್ಯ ಯೋಜನೆ ಅಡಿ ಮಕ್ಕಳು ಹಾಲನ್ನು ಸೇವಿಸಿದ್ದಾರೆ. ಹಾಲನ್ನು ಕುಡಿದು ಅರ್ಧ ಒಂದು ಗಂಟೆಯಲ್ಲಿ ಒಬ್ಬ ಹುಡುಗ ವಾಂತಿ ಮಾಡಿಕೊಂಡಿದ್ದಾನೆ. ಕೆಲ ಸಮಯದ ನಂತರ ಮತ್ತೆ ಮೂವರು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ನಂತರ ಒಂದರಿಂದ ಮೂರನೇ ತರಗತಿ ವರೆಗಿನ ಮಕ್ಕಳನ್ನು ವಿಚಾರಿಸಿದಾಗ ಏಳೆಂಟು ವಿದ್ಯಾರ್ಥಿಗಳು ಹೊಟ್ಟೆ ನೋವಾಗುತ್ತಿದೆ ಎಂದು ತಿಳಿಸಿದ್ದಾರೆ. ಅವರನ್ನು ತಕ್ಷಣವೇ ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
13 ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದ 14 ಮಕ್ಕಳನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ದಾಖಲಿಸಲಾಗಿದ್ದು ಅವರೆಲ್ಲರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಸಿದ್ದಾಪುರ ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಎಲ್ಲ ಮಕ್ಕಳು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ