ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಧ್ಯದ ರಸ್ತೆ ಅಗಲೀಕರಣಕ್ಕೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿರುವ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ತೆರವು ಕಾರ್ಯಾಚರಣೆ ಆರಂಭವಾಗಿದೆ. ದರ್ಗಾ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಭೈರಿದೇವರಕೊಪ್ಪದಲ್ಲಿರುವ ದರ್ಗಾವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈಗ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್‍ನಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ಬೆಳಗ್ಗೆ ಆರಂಭವಾಗಿದೆ. ಧಾರವಾಡ ಕಡೆಯಿಂದ ಬರುವಾಗ ಎಪಿಎಂಸಿ ಮೊದಲ ಗೇಟ್ ಬಳಿ ಹಾಗೂ ಹುಬ್ಬಲ್ಳಿಯಿಂದ ಹೋಗುವಾಗಭೈರಿದೇವರಕೊಪ್ಪದ ಬಳಿ ರಸ್ತೆ ಬಂದ್ ಮಾಡಲಾಗಿದೆ. ವಾಹನಗಳನ್ನು ಒಳ ರಸ್ತೆ ಮೂಲಕ ಬಿಡಲಾಗುತ್ತಿದೆ. ಪೊಲೀಸ್ ಸರ್ಪಗಾವಲಿನಲ್ಲಿ ದರ್ಗಾ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದುದರ್ಗಾ ಸುತ್ತಲೂ ಅಂತರ್ ಜಿಲ್ಲಾ ಪೊಲೀಸರು ಸೇರಿ ಶಸ್ತ್ರ ಸಜ್ಜಿತರಾದ ಆರ್‌ಎಎಫ್ ವಿಶೇಷ ಪೊಲೀಸ್ ತುಕಡಿಯನ್ನು ಕೂಡಾ ನಿಯೋಜನೆ ಮಾಡಲಾಗಿದೆ.. ಪೊಲೀಸರು ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ದರ್ಗಾ ಸುತ್ತ ತಗಡು ಜೋಡಿಸಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಭದ್ರತೆಗೆ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ