ಗಡಿ ವಿವಾದ: ಕರ್ನಾಟಕಕ್ಕೆ ನೀರು ಹರಿಸುವುದನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಮಹಾರಾಷ್ಟ್ರ ಸಚಿವ

ನಾಗ್ಪುರ : ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಸಚಿವ ಶಂಭುರಾಜ್‌ ದೇಸಾಯಿ, ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನದಿ ನೀರು ಪೂರೈಕೆ ಮಾಡುವ ಬಗ್ಗೆ ಮ=ಹಾರಾಷ್ಟ್ರ ಮರುಪರಿಶೀಲನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ ಎಂಬ ಬೊಮ್ಮಾಯಿ ಅವರ ನಿಲುವನ್ನು ಪ್ರಶ್ನಿಸಿದರು. ಗಡಿ ಪ್ರದೇಶಗಳಿಗೆ ಸಂಬಂಧಿಸಿದ ಮೊಕದ್ದಮೆಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿ ಇರುವಾಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ಈ ರೀತಿ ಹೇಳಿಕೆ ನೀಡಬಾರದು ಎಂದರು.

ಮಹಾರಾಷ್ಟ್ರ ಬಿಡುಗಡೆ ಮಾಡುವ ನೀರನ್ನು ಕರ್ನಾಟಕವು ಬೇಸಿಗೆಗಾಲದಲ್ಲಿ ಅವಲಂಬಿಸಿರುತ್ತದೆ ಎಂಬುದನ್ನು ಬೊಮ್ಮಾಯಿ ಮರೆಯಬಾರದು. ಇಂಥ ಹೇಳಿಕೆಗಳನ್ನು ನೀಡುವುದನ್ನು ಅವರು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನೀರು ನೀಡುವ ಕುರಿತು ಮರು ಚಿಂತನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜ ದೇಸಾಯಿ ಅವರನ್ನು ಕರ್ನಾಟಕ- ಮಹಾರಾಷ್ಟ್ರದ ಗಡಿ ವಿವಾದಕ್ಕೆ ಸಂಬಂಧಿಸಿದ ಕಾನೂನು ತಂಡದ ಜೊತೆ ಸಮನ್ವಯ ಸಾಧಿಸುವ ನೋಡಲ್‌ ಸಚಿವರನ್ನಾಗಿ ಮಹಾರಾಷ್ಟ್ರ ಸರ್ಕಾರವು ಕಳೆದ ತಿಂಗಳು ನೇಮಕ ಮಾಡಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement