ಗುರುವಾರ ಲಿಂಗಾಯತ ಪಂಚಮಸಾಲಿ ಸಮಾವೇಶ: ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48ರಲ್ಲಿ ಮಾರ್ಗ ಬದಲಾವಣೆ

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜದವರು ಗುರುವಾರ (ಡಿಸೆಂಬರ್‌ 22) ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಡಿಸೆಂಬರ್‌ 22ರಂದು ಪಂಚಮಸಾಲಿ ಸಮಾಜದವರು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.
ಆ ಕಾಲಕ್ಕೆ ಲಕ್ಷಾಂತರ ಜನರು ಹಿರೇಬಾಗೇವಾಡಿಯಿಂದ ಬಸ್ತವಾಡ ಸಮಾವೇಶ ಸ್ಥಳದ ವರೆಗೆ ಪಾದಯಾತ್ರೆ ಮೂಲಕ ಬೆಳಗಾವಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬರಲಿದ್ದಾರೆ. ಹೀಗಾಗಿ ಆ ವೇಳೆಗೆ ಸುಗಮ ವಾಹನ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ .

* ಬೆಳಗಾವಿಯಿಂದ ಹಿರೇಬಾಗೇವಾಡಿ ಮಾರ್ಗವಾಗಿ ಧಾರವಾಡ ಕಡೆಗೆ ಹೋಗುವ ಲಘು ವಾಹನಗಳು ರಾಷ್ಟ್ರೀಯ ಹೆದ್ದಾರಿ -48 ರ ಎಡಬದಿಯ ರಸ್ತೆಯನ್ನು ಉಪಯೋಗಿಸಬೇಕು ಎಂದು ಸೂಚಿಸಲಾಗಿದೆ.
* ಬೆಳಗಾವಿಯಿಂದ ಧಾರವಾಡ ಕಡೆಗೆ ಹೋಗುವ ಭಾರಿ ವಾಹನಗಳ ಸಂಚಾರವನ್ನು ಬಾಗೇವಾಡಿ ಮಾರ್ಗವಾಗಿ ಹೋಗುವುದನ್ನು ನಿರ್ಬಂಧಿಸಲಾಗಿದೆ . ಭಾರಿ ವಾಹನಗಳು ಬೆಳಗಾವಿಯಿಂದ ಸಾಂಬ್ರಾ – ನೇಸರಗಿ – ಬೈಲಹೊಂಗಲ ಕ್ರಾಸ್ – ಎಂ.ಕೆ.ಹುಬ್ಬಳ್ಳಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 48 ಕ್ಕೆ ಹೋಗಿ ಸೇರುವುದು ಎಂದು ಸೂಚಿಸಲಾಗಿದೆ.
* ಧಾರವಾಡ ಕಡೆಯಿಂದ ಬೆಳಗಾವಿಗೆ ಬರುವ ಲಘು ವಾಹನಗಳು ಬಾಗೇವಾಡಿ ಟೋಲ್‌ ನಾಕಾ ದಾಟಿದ ನಂತರ ಬಲಗಡೆಯ ರಸ್ತೆಗೆ ಮೂಲಕ ಹೋಗುವುದು. ಎಡಗಡೆಯ ರಸ್ತೆಯಲ್ಲಿ ಪಾದಯಾತ್ರೆ ಇರುವುದರಿಂದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬಲಗಡೆಯ ರಸ್ತೆಯನ್ನು ಕಿರ್ಲೋಸ್ಕರ್‌ ಶೋರೂಂ ವರೆಗೆ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ಮೇಲಿನಂತೆ ಹಿರೇಬಾಗೇವಾಡಿಯಿಂದ ಬೆಳಗಾವಿ ಕಡೆಗೆ ಸಾಗಿದ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು , ಸಾರ್ವಜನಿಕರು ಬದಲಾದ ಮಾರ್ಗಗಳಲ್ಲಿ ಸಂಚರಿಸಿ ಸಹಕರಿಸಲು ಕೋರಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement