ಚೀನಾ ನುಗ್ಗಿದಂತೆ ನಾವು ಕರ್ನಾಟಕಕ್ಕೆ ನುಗ್ಗುತ್ತೇವೆ…: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಕಿಡಿ ಹೊತ್ತಿಸಿದ ಸಂಜಯ ರಾವತ್‌

ಮುಂಬೈ: ಗಡಿ ವಿಚಾರವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವ ನಡುವೆಯೇ, ‘ಚೀನಾವು ನುಗ್ಗಿದಂತೆ ನಾವೂ ಕರ್ನಾಟಕವನ್ನೂ ಪ್ರವೇಶಿಸುತ್ತೇವೆ’ ಎಂದು ಹೇಳುವ ಮೂಲಕ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ಅವರು ಬುಧವಾರ ಹೊಸ ವಿವಾದ ಸೃಷ್ಟಿಸಿದ್ದಾರೆ.
ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.
ಚೀನಾ ಪ್ರವೇಶಿಸಿದಂತೆ ನಾವೂ (ಕರ್ನಾಟಕ) ಪ್ರವೇಶಿಸುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ, ಅದನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ, ಆದರೆ ಕರ್ನಾಟಕದ ಮುಖ್ಯಮಂತ್ರಿಗಳು ಈ ವಿವಾದಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ ಮತ್ತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಸಂಜಯ ರಾವತ್ ಹೇಳಿದರು.
ದಶಕಗಳಷ್ಟು ಹಳೆಯದಾದ ಗಡಿ ಸಂಘರ್ಷದ ಕುರಿತು ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಸಂಜಯ ರಾವತ್‌ ಅವರ ಈ ಹೇಳಿಕೆ ಬಂದಿದೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಏಕನಾಥ್ ಶಿಂಧೆ ಅವರ ಸರ್ಕಾರ ಈ ವಿಚಾರದಲ್ಲಿ ಟೀಕೆಗಳನ್ನು ಎದುರಿಸುತ್ತಿದೆ. ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷವೂ ಈ ವಿಷಯವನ್ನು ಪ್ರಸ್ತಾಪಿಸಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಈ ಹಿಂದೆ ವಿಧಾನಸಭೆಯಲ್ಲಿ ಗಡಿ ವಿವಾದದ ವಿಷಯವನ್ನು ಪ್ರಸ್ತಾಪಿಸಿ, “ಮಹಾರಾಷ್ಟ್ರದ ಲೋಕಸಭಾ ಸದಸ್ಯರೊಬ್ಬರನ್ನು ಬೆಳಗಾವಿ ಪ್ರವೇಶಿಸದಂತೆ ತಡೆಹಿಡಿಯಲಾಗಿದೆ, ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಯಾರೂ ಹೋಗಬಾರದು ಎಂದು ನಿರ್ಧರಿಸಲಾಗಿತ್ತು. ಆದರೆ ಅಲ್ಲಿಗೆ ಹೋಗುವುದನ್ನು ತಡೆಯುವಂತಹ ನಿರ್ಧಾರವನ್ನು ಅಲ್ಲಿನ ಜಿಲ್ಲಾಧಿಕಾರಿಗಳು ಹೇಗೆ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಪವಾರ್ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶಿಂಧೆ, “ಮೊದಲ ಬಾರಿಗೆ ದೇಶದ ಗೃಹ ಸಚಿವರು ಗಡಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ, ಅವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ, ನಾವು ಗಡಿ ನಿವಾಸಿಗಳ ಪರವಾಗಿರುವುದನ್ನು ಅವರಿಗೆ ಪ್ರಸ್ತುತಪಡಿಸಿದ್ದೇವೆ. ಗಡಿ ವಿವಾದದಲ್ಲಿ ರಾಜಕೀಯ ಬೇಡ, ಗಡಿ ವಾಸಿಗಳೊಂದಿಗೆ ಒಟ್ಟಾಗಿ ನಿಲ್ಲಬೇಕು ಎಂದು ಅಮಿತ್ ಶಾ ಹೇಳಿದ್ದಾರೆ ಎಂದರು.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಶಿಂಧೆ ಅವರ ಹೇಳಿಕೆಗೆ ಪ್ರತಿಧ್ವನಿಸಿದ್ದು, ಸರ್ಕಾರವು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಹೇಳಿದರು.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಸದಸ್ಯರು ಬೆಳಗಾವಿಗೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದ ನಂತರ ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿರುವ ಬೆಳಗಾವಿಯ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ.
ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಎಂಇಎಸ್‌ನ ಮಹಾಮೇಳವಾ ನಡೆಸಲು ಬೆಳಗಾವಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಮತ್ತು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪ್ರಸ್ತಾವನೆಯನ್ನು ತಿರಸ್ಕರಿಸಿತು.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement