ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ‌

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಂಗಾಮಿ ಸಭಾಪತಿಯಾಗಿದ್ದ ರಘುನಾಥ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
1980ರಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ ಅವರು, 1980, 1986, 1992, 1998, 2004, 2010, 2016 ಹಾಗೂ 2022ರಲ್ಲಿ ಸತತ ಎಂಟು ಅವಧಿಗೆ ಪಶ್ಚಿಮ ಶಿಕ್ಷಕ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ. ಇದು ರಾಷ್ಟ್ರದ ಇತಿಹಾಸದಲ್ಲಿಯೇ ಒಂದು ದಾಖಲೆಯಾಗಿದೆ.
ವಿವಿಧ ಸರ್ಕಾರಗಳಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ ಅವರು, ಎರಡು ಬಾರಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement