ಪಂಚಮಸಾಲಿ ಮೀಸಲಾತಿ ಹೋರಾಟ: ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಬೆಳಗಾವಿ : 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಗುರುವಾರ ಪಂಚಮಸಾಲಿ ಬೃಹತ್‌ ಸಮಾವೇಶ ನಡೆಯಲಿದ್ದು, ಇದರ ನಡುವೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಪಂಚಮಸಾಲಿ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಇದು ಮಹತ್ವ ಪಡೆದಿದೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಜಯಪ್ರಕಾಶ್‌ ಹೆಗ್ಡೆ ಅವರು ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಹಿನ್ನೆಲೆಯಲ್ಲಿ ಗುರುವಾರವೇ ಸಚಿವ ಸಂಪುಟ ನಡೆಯುತ್ತಿದ್ದು, ಈ ವಿಚಾರವಾಗಿ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಪಂಚಮಸಾಲಿ ಮೀಸಲು ಹೋರಾಟ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ತರಾತುರಿಯಲ್ಲಿ ಮಧ್ಯಂತರ ವರದಿ ತರಿಸಿಕೊಂಡಿದೆ ಎಂದು ಹೇಳಲಾಗಿದೆ.
ಸರ್ಕಾರದ ನಿರ್ದೇಶನದ ಬಳಿಕ ಅಧ್ಯಯನ ಮಾಡಿ ಪೂರ್ಣ ವರದಿ ಕೊಡಲಿದೆ. ಆಯೋಗದ ಪೂರ್ಣ ವರದಿ ಬಳಿಕ ಸರ್ಕಾರದಿಂದ ಮೀಸಲಾತಿ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಕಾನೂನು ಸಚಿವರ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ
ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರು ಸಲ್ಲಿಸಿದ ಮಧ್ಯಂತರ ವರದಿ ಬಗ್ಗೆ ಕಾನೂನು ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಬೆಳಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಭೇಟಿ ಮಾಡಿ ಮಧ್ಯಂತರ ವರದಿ ಕೊಟ್ಟಿದ್ದಾರೆ. ಮುಂದಿನ ಕ್ರಮದ ಬಗ್ಗೆ ಎಂದು ಕಾನೂನು ಸಚಿವರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಕಾನೂನಾತ್ಮಕವಾಗಿ ಚರ್ಚಿಸಿ ಆದಷ್ಟು ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿ ಆಗ್ರಹಿಸಿ ಗುರುವಾರ ಬೃಹತ್‌ ಸಮಾವೇಶ ನಡೆಯುತ್ತಿದೆ. ಲಕ್ಷಾಂತರ ಜನ ಸೇರುವ ಸಾಧ್ಯತೆ ಇದ್ದು, ಸುವರ್ಣಸೌಧದಿಂದ ಎರಡು ಕಿಲೋಮೀಟರ್ ಅಂತರದಲ್ಲಿ ಇರುವ ರಾಘವೇಂದ್ರ ಲೇಔಟ್‌ನ 60 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement