ಯಲ್ಲಾಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ನಿಧನ

posted in: ರಾಜ್ಯ | 0

ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತ,ಹಿರಿಯ ಸಹಕಾರಿ ಧುರಿಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಗುರುವಾರ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು.
ಅವರು ವಯೋಸಹಜ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಾಮಾಜಿಕ,ಶೈಕ್ಷಣಿಕ ಹಾಗೂ ಸಹಕಾರಿ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು ಕುಂದರಗಿಯಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಆರಂಭಿಸಿದ್ದರು. ೧೯೫೪ ರಲ್ಲಿ ಮಂಚೀಕೇರಿಯಲ್ಲಿ ತಾಲೂಕಿನ ಮೊಟ್ಟಮೊದಲ ಪ್ರೌಢಶಾಲೆ ಆರಂಭಿಸುವಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ೧೯೭೪ ರಲ್ಲಿ ಭರತನಹಳ್ಳಿಯಲ್ಲಿ ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿ, ಬಡ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್, ವಾಚನಾಲಯ, ಸಂಗೀತ ಕಲಿಕೆಗೂ ಅವಕಾಶ ನೀಡಿದ್ದರು. ದೇಶ ವಿದೇಶದ ದಾನಿಗಳನ್ನು ಸಂಪರ್ಕಿಸಿಸಿ ಪ್ರಗತಿ ಸಂಸ್ಥೆಯ ಏಳಿಗೆಗೆ  ಕೊಡುಗೆ ನೀಡಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸೋಂದಾ ಸ್ವರ್ಣವಲ್ಲೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾಗಿ ಸಂಸ್ಕೃತ ಕಾಲೇಜು ಆರಂಭಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಶಿರಸಿಯ ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ ಆಗಿ ಕಾರ್ಯ ನಿರ್ವಹಿಸಿದ್ದರು.
ಮಾವಿನಕಟ್ಟೆಯಲ್ಲಿ ೧೯೬೮ ರಲ್ಲಿ ಸೇವಾ ಸಹಕಾರಿ ಸಂಘ, ೧೯೬೬ ರಲ್ಲಿ ಭತ್ತ ಬೆಳೆಗಾರರ
ಸಹಕಾರಿ ಸಂಘ ಮತ್ತು ಅಕ್ಕಿ ಗಿರಣಿ ಆರಂಭಿಸಲು ಶ್ರಮಿಸಿದ್ದರು. ಮಾವಿನಕಟ್ಟೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆಗಳನ್ನು ಕೂಡ ಮಂಜೂರಿ ಮಾಡಿಸಿ ಸಾರ್ವಜನಿಕರಿಗೆ ನೆರವಾಗಿದ್ದರು.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮೊದಲ ಅಧ್ಯಕ್ಷರಾಗಿದ್ದ ಅವರು ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಶಿರಸಿಯ ಟಿ.ಎಸ್.ಎಸ್, ತಾಲೂಕು ಪಿ.ಎಲ್.ಡಿ.ಬ್ಯಾಂಕ್ ಮತ್ತು ಎಪಿಎಂಸಿ ನಿರ್ದೇಶಕರಾಗಿಯೂ
ಕಾರ್ಯನಿರ್ವಹಿಸಿದ್ದರು.ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಹಣ ನೀಡಿದ್ದೇನೆ: ಗೋಕರ್ಣದಲ್ಲಿ ಅರ್ಚಕರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಎಚ್‌ಡಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement