ಜನವರಿ 12ರಿಂದ ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿದವರಿಗೆ 50,000 ರೂ. ಬಹುಮಾನ-ಸಚಿವ ಡಾ.ನಾರಾಯಣಗೌಡ

ಬೆಳಗಾವಿ: 26ನೇ ರಾಷ್ಟ್ರೀಯ ಯುವ ಜನೋತ್ಸವ (National Youth Day) ಈ ಬಾರಿ ಜನವರಿ 12ರಿಂದ 16ರ ವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ರೇಷ್ಮೆ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಚಿವ ಡಾ.ನಾರಾಯಣಗೌಡ ತಿಳಿಸಿದರು.
26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50,000 ರೂ.ಗಳ ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಪ್ರಕಟಿಸಿದರು.
ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಿಶೇಷ ಲೋಗೋ, ಚಿಹ್ನೆ (ಮಾಸ್ಕಾಟ್) ಹಾಗೂ ವಿನ್ಯಾಸ ರಚನೆಗೆ ಸಾರ್ವಜನಿಕರಿಂದ ಸ್ಪರ್ಧೆಗೆ ಆಹ್ವಾನಿಸಲಾಗಿದೆ. ಲೋಗೋ ರಚನಾ ಸ್ಪರ್ಧೆ ಏರ್ಪಡಿಸಲಾಗಿದ್ದು, ಡಿಸೆಂಬರ್‌ 28, ಸಂಜೆ 6 ಗಂಟೆವರೆಗೂ ಗಡುವು ನೀಡಲಾಗಿದೆ. ಆಯ್ಕೆ ಸಮಿತಿ ಆಯ್ಕೆ ಮಾಡುವ ಅತ್ಯುತ್ತಮ ಲೋಗೋ, ಮಾಸ್ಕಟ್ ವಿನ್ಯಾಸಕಾರರಿಗೆ 50 ಸಾವಿರ ನಗದು ಹಾಗೂ ಅತ್ಯುತ್ತಮ ಥೀಮ್ ರಚಿಸಿದವರಿಗೆ 25 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಜೊತೆಗೆ 26 ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಿಂದ 16 ರವರೆಗೂ ರಾಷ್ಟ್ರ ಮಟ್ಟದ ಯುವ ಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇಶದ ವಿವಿಧ ರಾಜ್ಯಗಳಿಂದ 7,500 ಯುವ ಕಲಾವಿದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶೇಷ ಲೋಗೋ, ಮಾಸ್ಕಟ್, ಥೀಮ್ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ‌ ಎಂದು ತಿಳಿಸಿದರು.
26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದ್ದು, ಸಭೆ ನಡೆಸಲಾಗಿದೆ. ಅಚ್ಚುಕಟ್ಟಾಗಿ ಯುವಜನೋತ್ಸವ ಆಚರಿಸಲು ಮುಂದಿನ ವಾರದಿಂದ ಭರದ ಸಿದ್ಧತೆ ಕೈಗೊಳ್ಳಲಾಗುವುದು. ಊಟೋಪಹಾರ, ವಸತಿ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement