ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಶೀಘ್ರ ವರದಿ ಸಲ್ಲಿಸಲು ಸೂಚನೆ : ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಳಗಾವಿ: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಕುರಿತಂತೆ ಶೀಘ್ರವಾಗಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುವರ್ಣಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಎಲ್ಲಾ ಶಾಸಕರು ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಬೇಕೆಂಬ ಹಿನ್ನೆಲೆಯಲ್ಲಿ ಈಗಿನ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾಗಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಕುಂಚಿಟಿಗ ಸಮುದಾಯದ್ದು ಕೇಂದ್ರದ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ಸಮುದಾಯವನ್ನು ಕೇಂದ್ರದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಅವರು ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಹಿಂದೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಸಿ ಮನವಿ ಕೊಟ್ಟಿದ್ದರು. ಆ ಮನವಿಯನ್ನು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲಾಗಿದೆ. ಸಂವಿಧಾನ ಬದ್ಧವಾದ ಹಿಂದುಳಿದ ವರ್ಗಗಳ ಆಯೋಗ ಶಿಫಾರಸ್ಸು ಅಗತ್ಯವಿದೆ. ಹೀಗಾಗಿ ಕಳೆದ ತಿಂಗಳು 29ರಂದು ಕಳುಹಿಸಲಾಗಿದೆ. ಈಗಿನ ಮನವಿಯನ್ನೂ ಆಯೋಗಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

4 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement