ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

ಅಲಹಾಬಾದ್‌: ಎರಡು ವರ್ಷಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತನಿಗೆ ಕೊನೆಗೂ ಜಾಮೀನು ದೊರಕಿದೆ.
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆಗೆಂದು ತೆರಳಿದ್ದ ವೇಳೆ ಬಂಧಿತರಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಶುಕ್ರವಾರ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇವರಿಗೆ ಜಾಮೀನು ನೀಡಲಾಗಿದೆ.
ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ದಿನೇಶ್‌ ಕುಮಾರ್‌ ಸಿಂಗ್‌ ಅವರು ಸಿದ್ದಿಕಿ ಕಪ್ಪನ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಹಾಥ್‌ರಸ್‌ನಲ್ಲಿ ನಡೆದಿದ್ದ 19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗೆಂದು ತೆರಳಿದ್ದ ಮಲಯಾಳಂ ಸುದ್ದಿ ಜಾಲತಾಣ ʼಅರಿಮುಖಂʼ ವರದಿಗಾರ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಕೆಯುಡಬ್ಲ್ಯುಜೆ) ದೆಹಲಿ ಘಟಕದ ಕಾರ್ಯದರ್ಶಿ ಕಪ್ಪನ್ ಹಾಗೂ ಇತರ ಮೂವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಹಾಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದ್ದರು.
ಕಪ್ಪನ್ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಕಾಯಿದೆಯ ಸೆಕ್ಷನ್ 3 (ಹಣ ವರ್ಗಾವಣೆ ಅಪರಾಧ) ಮತ್ತು ಸೆಕ್ಷನ್‌ 4ರಡಿ (ಹಣ ವರ್ಗಾವಣೆ ಶಿಕ್ಷೆ) ಜಿಲ್ಲಾ ನ್ಯಾಯಾಧೀಶ ಸಂಜಯ ಶಂಕರ ಪಾಂಡೆ ಅವರು ಡಿಸೆಂಬರ್ 8ರಂದು ಆರೋಪ ನಿಗದಿಪಡಿಸಿದ್ದರು. ಅಕ್ಟೋಬರ್ 31ರಂದು, ಲಕ್ನೋದ ಸೆಷನ್ಸ್ ನ್ಯಾಯಾಲಯ ಪಿಎಂಎಲ್‌ಎ ಪ್ರಕರಣದಲ್ಲಿ ಕಪ್ಪನ್‌ ಅವರಿಗೆ ಜಾಮೀನು ನಿರಾಕರಿಸಿತ್ತು.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

 

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement