ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ : ಮೊದಲ ಬಾರಿ ಗೆದ್ದ ಮಹಿಳೆ ಎಎಪಿಯ ಮೇಯರ್ ಅಭ್ಯರ್ಥಿ

ನವದೆಹಲಿ : ಆಮ್‌ ಆದ್ಮಿ ಪಾರ್ಟಿಯು ದೆಹಲಿಯ ಪೂರ್ವ ಪಟೇಲ್ ನಗರ ವಾರ್ಡ್‌ನಿಂದ ಗೆದ್ದ ಕೌನ್ಸಿಲರ್ ಶೆಲ್ಲಿ ಒಬೆರಾಯ್ (39) ಅವರನ್ನು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮೇಯರ್ ಅಭ್ಯರ್ಥಿಯಾಗಿ ಘೋಷಿಸಿದೆ.
ಉಪಮೇಯರ್ ಹುದ್ದೆಗೆ ಚಾಂದಿನಿ ಮಹಲ್ ವಾರ್ಡ್‌ನ ಕೌನ್ಸಿಲರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರ ಹೆಸರನ್ನು ಪಕ್ಷದ ರಾಷ್ಟ್ರೀಯ ಘೋಷಿಸಲಾಯಿತು. ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಶೆಲ್ಲಿ ಅವರನ್ನು ಮೇಯರ್ ಅಭ್ಯರ್ಥಿಯಾಗಿ ಘೋಷಿಸಲು ತೀರ್ಮಾನಿಸಲಾಯಿತು.
ಸಂದರ್ಶಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದ ಶೆಲ್ಲಿ ಒಬೆರಾಯ್ ಅವರು ದೆಹಲಿ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಎಎಪಿ ಶಾಸಕ ಶೋಯೆಬ್ ಇಕ್ಬಾಲ್ ಪುತ್ರ ಮೊಹಮ್ಮದ್ ಇಕ್ಬಾಲ್ ಉಪ ಮೇಯರ್ ಅಭ್ಯರ್ಥಿಯಾಗಿದ್ದು, ಅವರು ಎರಡನೇ ಬಾರಿಗೆ ಕೌನ್ಸಿಲರ್‍ ಆಗಿ ಆಯ್ಕೆಯಾಗಿದ್ದಾರೆ. ಎಂಸಿಡಿಯಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಕೌನ್ಸಿಲರ್‌ಗೆ ಮೇಯರ್ ಹುದ್ದೆ ಮೀಸಲಾಗಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಮೊದಲ ಸಭೆ ಜನವರಿ 6ರಂದು ನಡೆಯಲಿದೆ. ಇದರಲ್ಲಿ 250 ಮಂದಿ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದು, ಅವರು ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಗಳಿಗೆ ಆರು ಮಂದಿಯನ್ನು ಆಯ್ಕೆ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement