ಉತ್ತರಾಖಂಡ: ‘ಮತಾಂತರ’ ಆರೋಪದ ಮೇಲೆ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ ಗುಂಪು

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲಾ ಗ್ರಾಮದಲ್ಲಿ ಶುಕ್ರವಾರ ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಬಲವಂತದ ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕನಿಷ್ಠ 30 ಯುವಕರ ತಂಡವೊಂದು ದೊಣ್ಣೆ ಹಿಡಿದು ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಹಿಂದೂ ಸಂಘಟನೆಯೆಂದು ಹೇಳಿಕೊಳ್ಳುವ ವ್ಯಕ್ತಿಗಳಿಂದ ಹಲ್ಲೆಗೊಳಗಾದ ಪಾಸ್ಟರ್ ಲಾಜರಸ್ ಕಾರ್ನೆಲಿಯಸ್ ಮತ್ತು ಅವರ ಪತ್ನಿ ಸುಷ್ಮಾ ಕಾರ್ನೇಲಿಯಸ್ ಸೇರಿದಂತೆ ಆರು ಜನರನ್ನು ಪೊಲೀಸರು ನಂತರ ಬಂಧಿಸಿದರು ಮತ್ತು ನಂತರ ವಿಷಯವನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಅವರನ್ನು ಬಿಡುಗಡೆ ಮಾಡಲಾಯಿತು.
ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಿಂದ ಸುಮಾರು 150 ಕಿಮೀ ದೂರದಲ್ಲಿರುವ ಗ್ರಾಮದ ಹೋಪ್ ಮತ್ತು ಲೈಫ್ ಸೆಂಟರ್‌ನಲ್ಲಿ ಮಧ್ಯಾಹ್ನದ ವೇಳೆಗೆ ದಾಳಿ ನಡೆದಿದೆ. ಮಸ್ಸೂರಿಯ ಯೂನಿಯನ್ ಚರ್ಚ್‌ಗೆ ಸೇರಿದ ಪಾದ್ರಿ ಪ್ರಾರ್ಥನೆಯ ನೇತೃತ್ವ ವಹಿಸಿದ್ದರು.
ಇತ್ತೀಚೆಗಷ್ಟೇ ರಾಜ್ಯದ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಿದ್ದು, ಇಂದು, ಶನಿವಾರ ರಾಜ್ಯಪಾಲರ ಒಪ್ಪಿಗೆ ಪಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement