ಕೋವಿಡ್‌-19 ಮುನ್ನೆಚ್ಚರಿಕೆ : ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕು ಮತ್ತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಚಾಲನಾ ಸಿಬ್ಬಂದಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ದೇಶದಲ್ಲಿ ಕೋವಿಡ್‌ ನಿಯಂತ್ರಣದಲ್ಲಿದ್ದರೂ ಕೆಲವು ದೇಶಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಎಚ್ಚರ ವಹಿಸುವ ಅಗತ್ಯವಿದೆ. ಸಮೂಹ ಸಾರಿಗೆ ಪ್ರಯಾಣದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ನೌಕರರು ಹಾಗೂ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೆಟ್ರೊದಲ್ಲೂ ಮಾಸ್ಕ್‌ ಬೇಕು…
ಮಾಸ್ಕ್‌ ಹಾಕಿದರೆ ಮಾತ್ರ ನಮ್ಮ ಮೆಟ್ರೊ ರೈಲು ನಿಲ್ದಾಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಮಾಸ್ಕ್‌ ಹಾಕದೆ ಬರುವ ಪ್ರಯಾಣಿಕರನ್ನು ಭದ್ರತಾ ಸಿಬ್ಬಂದಿ ತಡೆಯುತ್ತಿದ್ದಾರೆ.
ಕೋವಿಡ್‌ ಸಂಪೂರ್ಣ ತಹಬದಿಗೆ ಬಂದ ನಂತರವೂ ನಮ್ಮ ಮೆಟ್ರೊದಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿತ್ತು. ಮೆಟ್ರೊದಲ್ಲಿ ಪ್ರತಿ ದಿನ ಸುಮಾರು ಐದು ಲಕ್ಷ ಜನ ಪ್ರಯಾಣಿಸುತ್ತಾರೆ. ವಿಶೇಷ ಸಂಸದರ್ಭಗಳಲ್ಲಿ ಇದು ಇನ್ನೂ ಹೆಚ್ಚಾಗಿರುತ್ತದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement