ವೀಡಿಯೊಕಾನ್ ಸಾಲ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ ಕೊಚ್ಚರ್‌ ಗೆ 3 ದಿನಗಳ ಸಿಬಿಐ ಕಸ್ಟಡಿ

ಮುಂಬೈ : ವೀಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ್ ಅವರನ್ನು (ಸಿಬಿಐ) ಮುಂಬೈ ವಿಶೇಷ ನ್ಯಾಯಾಲಯ ಶನಿವಾರ ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಿದೆ.
ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ನಿನ್ನೆ ಶುಕ್ರವಾರ ಬಂಧಿಸಲಾಯಿತು. ಅವರಿಬ್ಬರೂ ತನಿಖೆಗೆ ಸಹಕರಿಸಲಿಲ್ಲ ಹೀಗಾಗಿ ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.
2012ರಲ್ಲಿ ವಿಡಿಯೋಕಾನ್ ಗ್ರೂಪ್‌ಗೆ ಐಸಿಐಸಿಐ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ ಕೊಚ್ಚರ್‌ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ ಧೂತ್, ನ್ಯುಪವರ್ ರಿನ್ಯೂಬಲ್ಸ್, ಸುಪ್ರೀಮ್ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ ಅಡಿ ಸಿಬಿಐ ಪ್ರಕರಣ ದಾಖಲಿಸಿದೆ.
ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ಸಾಲ ಪಡೆದ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ ಧೂತ್ ನ್ಯುಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿಗಳು ಐಸಿಐಸಿಐ ಬ್ಯಾಂಕ್‌ಗೆ ವಂಚಿಸಲು ಇತರರೊಂದಿಗೆ ಕ್ರಿಮಿನಲ್ ಸಂಚು ರೂಪಿಸಿ ಖಾಸಗಿ ಕಂಪನಿಗಳಿಗೆ ಕೆಲವು ಸಾಲಗಳನ್ನು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಸಿಬಿಐ 2019 ರಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ "ರಾಬರ್ಟ್ ವಾದ್ರಾ ಅಬ್ ಕಿ ಬಾರ್" ಪೋಸ್ಟರ್...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement