ಮಂಡ್ಯದಲ್ಲಿ ಡಿಸೆಂಬರ್‌ 30ರಂದು ಬಿಜೆಪಿ ಸಮಾವೇಶ : ಅಮಿತ್ ಶಾ ಆಗಮನ

ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಡಿಸೆಂಬರ್‌ 30ರಂದು ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.
ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಬರುತ್ತಿರುವ ಅಮಿತ್ ಶಾ ಪಕ್ಷದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಒಂದು ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಈ ಸಮಾವೇಶದ ನಂತರ ಮಂಡ್ಯದಲ್ಲೇ ಅಮಿತ್ ಶಾ ಸಭೆ ನಡೆಸಿ ಚುನಾವಣೆ ತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement