ಸುರತ್ಕಲ್ ಹತ್ಯೆ ಪ್ರಕರಣ: ನಾಲ್ಕು‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣd ನಂತರ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಸೆಕ್ಷನ್ 144 ಹಾಗೂ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ.
ಈ ಕುರಿತು ಮಂಗಳೂರು ನಗರ ಪೊಲೀಸ್ ಆಯಕ್ತರಾದ ಶಶಿಕುಮಾರ ಅವರು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್‌ 25ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್‌ 27 ರ ಬೆಳಗ್ಗೆ 6 ಗಂಟೆ ವರೆಗೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ಆದರೆ ಈ ನಿಷೇಧಾಜ್ಞೆ ಕ್ರಿಸ್‌ಮಸ್ ಆಚರಣೆ/ ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಅಲ್ಲದೆ ಸೆಕ್ಷನ್ 144 ಜಾರಿ ಇರುವ ಪ್ರದೇಶದಲ್ಲಿನ ಎಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಕೆಲಸದ ಪಾಳಿಯನ್ನು ಸಂಜೆ 6 ಗಂಟೆಗೆ ಒಳಗೆ ಮು ಹಾಗೂ ಸಂಜೆ 6 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಸಿಬ್ಬಂದಿ ರಸ್ತೆಗಳಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement