ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಏಮ್ಸ್‌ಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಾದ ಕಾರಣಗಳು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಹಣಕಾಸು ಸಚಿವರು ಊಟದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ಸಾಧ್ಯತೆಯಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ನಿಮ್ಮ ಕಾಮೆಂಟ್ ಬರೆಯಿರಿ

advertisement