ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ: ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ.
ಬಸವರಾಜ ಬೆಳಗಾಂವ್ಕರ (23), ಗಿರೀಶ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಯುವಕರು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ವಾಹನ ಮೈದಾನಕ್ಕೆ ನುಗ್ಗಿಸಿದ್ದಾನೆ. ಇದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಇವರ ನಡುವೆ ವಾಗ್ದಾದ ನಡೆದಿದೆ. ನಂತರ ಚಾಲಕ ಇಬ್ಬರಿಗೂ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕೊಂಡಿಯ್ಯುವಾಗಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳು ಬಿಮ್ಸ್‌ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement