ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಬೆಳಗಾವಿ: ಪರಿಶಿಷ್ಟ ಜಾತಿ (ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ಇದನ್ನು ವಿಧಾನ ಪರಿಷತ್‌ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ -2022 ಅನ್ನು ಕಳೆದ ಮಂಗಳವಾರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು, ಸೋಮವಾರ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಈ ವಿಧೇಯಕವು ಪ್ರಮುಖವಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ಸರ್ಕಾರ ನೇಮಕಾತಿ, ಹುದ್ದೆಗಳ‌ ಮೀಸಲಾತಿ ನೀಡುತ್ತದೆ. ರಾಜ್ಯ ಸರ್ಕಾರ ಮಂಡಿಸಿದ ಈ ವಿಧೇಯಕಕ್ಕೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯಿಸಿ ಈ ಬಿಲ್ ಗೆ ನಮ್ಮದು ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದರು.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಮಸೂದೆ ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.
ಆರು ತಿಂಗಳೊಳಗೆ ಈ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಅದರ ಅನ್ವಯ ಈ ಅಧಿವೇಶನದಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡಿಸಿ, ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಇನ್ನು ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಬೇಕಿದೆ. ಪರಿಷತ್ ನಲ್ಲಿ ಅಂಗೀಕಾರ ಪಡೆದ ನಂತರ, ಇದು SC/ST ಪಂಗಡದವರಿಗೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ನೇಮಕಾತಿಗಳಲ್ಲಿ ಹೆಚ್ಚಿನ ಮೀಸಲಾತಿಯನ್ನು ಒದಗಿಸುತ್ತದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement