ಮೈಸೂರು: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ; ಪ್ರಹ್ಲಾದ ಮೋದಿ, ಪುತ್ರ, ಸೊಸೆಗೆ ಗಾಯ

posted in: ರಾಜ್ಯ | 0

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ ಮೋದಿ ಕುಟುಂಬ ಸಮೇತವಾಗಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಡಕೊಳ‌ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತ ಅಪಘಾತಕ್ಕೀಡಾಗಿದೆ.
ಪ್ರಹ್ಲಾದ ಮೋದಿ, ಅವರ ಪುತ್ರ ಹಾಗೂ ಸೊಸೆಗೆ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರಹ್ಲಾದ ಮೋದಿ, ಮೈಸೂರಿನಿಂದ ಚಾಮರಾಜನಗರದ ಬಂಡೀಪುರಕ್ಕೆ (Bandipur) ತೆರಳುತ್ತಿದ್ದರು. ಪ್ರಹ್ಲಾದ್ ಮೋದಿ ಅವರು ತಮ್ಮ ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಮರ್ಸಿಡಿಸ್ ಬೆಂಜ್ ಎಸ್‌ಯುವಿಯಲ್ಲಿ ಬಂಡೀಪುರಕ್ಕೆ ತೆರಳುತ್ತಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿಗೆ  ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದಾಗ ಅವರ ಬೆಂಗಾವಲು ಪಡೆ ಕೂಡ ಅವರೊಂದಿಗೆ ಪ್ರಯಾಣಿಸುತ್ತಿತ್ತು. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ಕಾರಿನಲ್ಲಿದ್ದ ಏರ್‌ಬ್ಯಾಗ್‌ನಿಂದ ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾರೆ. ಅವರೊಂದಿಗೆ ತೆರಳುತ್ತಿದ್ದ ಇತರ ಕಾರಿನಲ್ಲಿದ್ದವರು ಅವರನ್ನು ಸ್ಥಳದಿಂದ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ತಕ್ಷಣವೇ ಪ್ರಹ್ಲಾದ ಮೋದಿ ಹಾಗೂ ಕುಟುಂಬಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಪ್ರಹ್ಲಾದ್ ಮೋದಿ ಸೊಸೆ ಗಾಯ ತೀವ್ರವಾಗಿರುವ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಮ್ಮಗನ ಕಾಲಿಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೊಡಗು ಮೈಸೂರು ಸಂಸದ ಪ್ರತಾಪ ಸಿಂಹ ಟ್ವೀಟ್ ಮಾಡಿದ್ದಾರೆ. ಮೋದಿ ಸಹೋದರ ಪ್ರಹ್ಲಾದ ಮೋದಿ ಕಾರು ಅಪಘಾತವಾಗಿದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್‌ಪಿ ಸೀಮಾ ಲಾಟ್ಕರ್, ಡಿವೈಎಸ್‌ಪಿ ಗೋವಿಂದರಾಜು ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯ ಕಿರಿಯ ಸಹೋದರ ಪ್ರಹ್ಲಾದ ಮೋದಿ, ಗುಜರಾತ್‌ನಲ್ಲಿ ನ್ಯಾಯ ಬೆಲೆ ಅಂಗಡಿ ನಡೆಸುತ್ತಿದ್ದರು. 69 ವರ್ಷದ ಪ್ರಹ್ಲಾದ್ ಮೋದಿ ಸದ್ಯ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ಆದರೆ ಗುಜರಾತ್ ನ್ಯಾಯಬೆಲೆ ಅಂಗಡಿ ಒಕ್ಕೂಟಗಳ ಅಧ್ಯಕ್ಷರಾಗಿದ್ದಾರೆ. ಇಷ್ಟೇ ಅಲ್ಲ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್ ಉಪಾಧ್ಯಕ್ಷರಾಗಿರುವ ಅವರು, ಹಲವು ಹೋರಾಟಗಳ ನೇತೃತ್ವವಹಿಸಿದ್ದಾರೆ.
ನ್ಯಾಯಬೆಲೆ ಅಂಗಡಿ ನಡೆಸವವರಿಗೆ ಅಗುತ್ತಿರುವ ಅನ್ಯಾಯ ಸಮಸ್ಯೆಗಳ ಕುರಿತು ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗಲೇ ಗುಜರಾತ್‌ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು.ದಾಮೋದರ್ ದಾಸ್ ಹಾಗೂ ಹೀರಾಬೆನ್ ಮೋದಿಯ ಮಕ್ಕಳಲ್ಲಿ ಸೋಮಾಭಾಯಿ ಮೋದಿ ಹಿರಿಯರಾಗಿದ್ದಾರೆ. 2ನೇ ಪುತ್ರ ಅಮೃತ ಮೋದಿ, ಇನ್ನು ಮೂರನೆಯವರು ಪ್ರಧಾನಿ ನರೇಂದ್ರ ಮೋದಿ, ನಾಲ್ಕನೆಯವರು ಪ್ರಹ್ಲಾದ್ ಮೋದಿ.

ಇಂದಿನ ಪ್ರಮುಖ ಸುದ್ದಿ :-   ಖಾಸಗಿ ಬಸ್-ಬೈಕ್‌ ಡಿಕ್ಕಿ: ತಂದೆ-ಮಗಳು ಸಾವು

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement