ಯಲ್ಲಾಪುರ: ಪಿಕ್ನಿಕ್‌ಗೆ ಹೋಗಿದ್ದ ವಿದ್ಯಾರ್ಥಿ ಗಂಗಾವಳಿ ನದಿಯಲ್ಲಿ ಮುಳುಗಿ ಸಾವು

ಯಲ್ಲಾಪುರ: ಶಾಲೆಯ ವತಿಯಿಂದ ಪಿಕ್ನಿಕ್‌ಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗಂಗಾವಳಿ ನದಿಯಲ್ಲಿ ಮುಳುಗಿ ಹೋಗಿ ಸಾವು ಕಂಡ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಪ್ರಕಾಶ ವಿಠ್ಠು ಪಟಕಾರೆ (೧೬) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪಿಕ್ನಿಕ್ಕಿಗೆಂದು ಸಮೀಪದ ನದಿಯ ಹತ್ತಿರ ಕಾಲು ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕ ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಸ್ಥಳೀಯ ಮೀನುಗಾರರು ಹುಡಾಕಾಟ ನಡೆಸಿದ ಬಳಿಕ ಮಂಗಳವಾರ ಮಧ್ಯಾಹ್ನ ೩ ಗಂಟೆಯ ಹೊತ್ತಿಗೆ ಆತನ ಮೃತದೇಹ ದೊರೆತಿದೆ ಎಂದು ವರದಿಯಾಗಿದೆ.

4.3 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಳಪೆ ರಸ್ತೆಗಳಿಂದ 'ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ನಿಮ್ಮ ಕಾಮೆಂಟ್ ಬರೆಯಿರಿ

advertisement