ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಂಡನೆ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆಯ ಜನ ನೆಮ್ಮದಿಯಿಂದಿದ್ದಾರೆ. ಮಹಾರಾಷ್ಟ್ರದ ನಾಯಕರು ರಾಜಕಾರಣಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಹಾಗೂ ನಿರ್ಣಯಗಳನ್ನು ಮಂಡಿಸುತ್ತಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ. ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿಯಿಂದಾಚೆಯಿರುವ ಕನ್ನಡಿಗರ ರಕ್ಷಣೆಗೂ ಸರ್ಕಾರ ಬದ್ಧವಾಗಿದೆ ಎಂದರು.
ಸುಪ್ರೀಂ ಕೋರ್ಟ್‌ ಮುಂದೆ ಈ ವಿಚಾರವಿದೆ. ನಾವು ನಮ್ಮ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದರೆ ಅವರು ನಮ್ಮ ಜಾಗವನ್ನು ಪರೆಯುವುದಾಗಿ ನಿರ್ಣಯ ಮಂಡಿಸಿದ್ದಾರೆ. ಇದು ನಮಗೂ ಅವರಿಗಿರುವ ವ್ಯತ್ಯಾಸ. ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲಿ ಇದಕ್ಕೆ ಬೆಲೆ ಇಲ್ಲ. ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿದೆ. ನಮ್ಮ ನಿಲುವು ಸಂವಿಧಾನಬದ್ಧ ಹಾಗೂ ನ್ಯಾಯಸಮ್ಮತವಾಗಿದೆ. ನಾವು ವಿಧಾನಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಕಾನೂನಿನ ವ್ಯಾಪ್ತಿಯಲ್ಲಿದೆ. ಆದರೆ ವ್ಯತಿರಿಕ್ತವಾದ ಮಹಾರಾಷ್ಟ್ರದ ನಿರ್ಣಯ ಜವಾಬ್ದಾರಿಯುತವಲ್ಲ. ಇಡೀ ದೇಶ ಇದನ್ನು ನೋಡುತ್ತಿದ್ದು, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement