ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಳಗಾವಿ: ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕವು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರವಾಯಿತು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿದರು. ನಂತರ ವಿಧೇಯಕವು ಧ್ವನಿಮತದ ಮೂಲಕ ಅಂಗೀಕಾರಗೊಂಡಿತು.
ಬೆಂಗಳೂರು ಮಹಾನಗರದ ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಒಂದೇ ಸಂಸ್ಥೆ ಸ್ಥಾಪಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು ಮಹಾನಗರಕ್ಕೆ ಸುತ್ತಮುತ್ತಲಿನ ಪುರಸಭೆ, ನಗರಸಭೆಗಳು ಸೇರಿ ಸುಮಾರು 110 ಹಳ್ಳಿಗಳು ಸೇರ್ಪಡೆಯಾಗಿವೆ. ಸುಮಾರು 25 ವರ್ಷಗಳಿಂದ ಬೆಂಗಳೂರಿನ ರಸ್ತೆಗಳ ಅಗಲೀಕರಣವಾಗಿಲ್ಲ. ಮಹಾನಗರದಲ್ಲಿ ಸುಮಾರು 1.25 ಕೋಟಿ ಜನಸಂಖ್ಯೆ ಇದೆ, ಸುಮಾರು 1 ಕೋಟಿ 3 ಲಕ್ಷ ವಾಹನಗಳಿವೆ. ಅಲ್ಲದೆ, ಪ್ರತಿದಿನ ಸುಮಾರು 5 ಸಾವಿರಕ್ಕೂ ಹೆಚ್ಚು ಹೊಸವಾಹನಗಳು ರಸ್ತೆಗೆ ಇಳಿಯುತ್ತಿವೆ. ಈಗ ಇವುಗಳ ನಿರ್ವಹಣೆಯನ್ನು ಅನೇಕ ಸಂಸ್ಥೆಗಳು ನೋಡಿಕೊಳ್ಳುತ್ತಿವೆ. ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಒಂದೇ ಸಂಸ್ಥೆ ಸ್ಥಾಪಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದು ಹೊಸ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯದ ಜವಾಬ್ದಾರಿ ಹಾಗೂ ಸಮಗ್ರ ಪರಿಹಾರ ಕಂಡುಕೊಳ್ಳಲು ವಿಧೇಯಕ ತರಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ವಿಧಾನ ಪರಿಷತ್ ಚುನಾವಣೆ; 4 ಕ್ಷೇತ್ರಗಳಲ್ಲಿ ಎರಡರಲ್ಲಿ ಎನ್‌ಡಿಎ ಗೆಲುವು, ಉಳಿದ ಎರಡರಲ್ಲೂ ಗೆಲುವು ಬಹುತೇಕ ಖಚಿತ

ಬೆಂಗಳೂರು ಮಹಾನಗರಕ್ಕೆ ರಿಂಗ್ ರಸ್ತೆ, ಪೆರಿಫೆರಲ್ ರಿಂಗ್ ರಸ್ತೆ ಮತ್ತಿತರ ಕಾಮಗಾರಿಗಳ ಭೂಸ್ವಾಧೀನ ಕಾರ್ಯ,ಮೆಟ್ರೋ ಮಾರ್ಗದ ವಿಸ್ತರಣೆ ಮೊದಲಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು ವಿಧೇಯಕದ ಕುರಿತು ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಬೆಂಗಳೂರಿನ ಸಂಚಾರದ ವೈಜ್ಞಾನಿಕ ನಿರ್ವಹಣೆಗೆ ಅಧ್ಯಯನಕ್ಕೆ ಐಐಎಸ್‌ಸಿ ಗೆ ಕೋರಲಾಗಿದೆ. ಈ ಹಿಂದಿನ ವರದಿಗಳನ್ನು ಪುನರ್ ಪರಿಶೀಲನೆ ಜೊತೆಗೆ ವಿಶ್ವದ ದೊಡ್ಡ ನಗರಗಳಾದ ನ್ಯೂಯಾರ್ಕ್, ಶಾಂಘೈ ಮತ್ತಿತರ ನಗರಗಳ ಸಂಚಾರ ನಿರ್ವಹಣೆಯನ್ನೂ ಕೂಡ ಅಧ್ಯಯನ ಮಾಡಲಾಗುವುದು ಎಂದರು.
ಸಂಚಾರ ನಿರ್ವಹಣೆಗೆ ಐದು ಕಡೆ ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈಗ ಸಾಕಷ್ಟು ಸುಧಾರಣೆಗಳು ಕಂಡು ಬಂದಿವೆ. ಸಂಚಾರ್ ಕಮಾಂಡ್ ಕೇಂದ್ರ ಹಾಗೂ 7 ಸಾವಿರ ನಿರ್ಭಯ ಕ್ಯಾಮೆರಾಗಳನ್ನು ಕೂಡ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎಸ್‌ಐಆರ್‌-2026 ಅಂತಿಮ ಪಟ್ಟಿ ಪ್ರಕಟ ; ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement