ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ ತೇಲಾಡುವ ಮಂದಿ ಸುರಕ್ಷತೆಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ.
ಯಾರೇ ಕುಡಿದು ಟೈಟಾದರೂ ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್ 31ರ ರಾತ್ರಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ. ಬಾಬಾ ಅವರು ಈ ಮೂಲಕ ಮತ್ತೊಂದು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಚ್ಎಸ್ಆರ್ ಲೇಔಟ್ ನಲ್ಲಿ ಸಂಪೂರ್ಣ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗ್ನೇಯ ವಿಭಾಗದಲ್ಲಿ 108 ಪಬ್, ರೆಸ್ಟೋರೆಂಟ್ಗಳಿವೆ, ಪ್ರತಿಯೊಂದು ಪಬ್, ರೆಸ್ಟೋರೆಂಟ್ ಮುಂದೆಯೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಎಣ್ಣೆ ಹೊಡೆದು ಫುಲ್ ಟೈಟಾಗಿ ಪ್ರಜ್ಞೆ ತಪ್ಪಿ ಬೀಳುವವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಕುಡಿದ ಅಮಲಿನಲ್ಲಿ ಕುಣಿದು ಕುಪ್ಪಳಿಸಿ, ಗಾಯ ಮಾಡಿಕೊಂವರಿಗೂ ಈ ವ್ಯವಸ್ಥೆ ಮಾಡಲಾಗುತ್ತಿದೆ. ಆಂಬುಲೆನ್ಸ್ ಮೂಲಕ ಕುಡಿದು ಟೈಟ್ ಆದವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
ಆಗ್ನೇಯ ವಿಭಾಗದ ಡಿಸಿಪಿಯು ಈ ಕುರಿತು ಎಲ್ಲಾ ಆಸ್ಪತ್ರೆಗಳಿಗೂ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಗೂ ಪತ್ರ ಬರೆಯಲಾಗಿದೆ. ಪ್ರತಿಯೊಂದು ಪಬ್, ರೆಸ್ಟೂರೆಂಟ್‌ಗಳಿಗೆ ಪ್ರವೇಶಿಸುವ ಪ್ರತಿಯೊಬ್ಬರ ಮುಖವೂ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುತ್ತದೆ. ಪೊಲೀಸರಿಗೆ ಪಬ್, ರೆಸ್ಟೂರೆಂಟ್‌ಗೆ ಪ್ರವೇಶಿಸುವ ಮುನ್ನ ಮಾಸ್ಕ್ ಸರಿಸಿ ಮುಖ ತೋರಿಸಿ ಮುಂದಕ್ಕೆ ಹೋಗಬೇಕು. ಪ್ರತಿಯೊಬ್ಬರ ಫೋಟೊ, ವಿವರವನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ. ಪಬ್‌ನೊಳಗೆಯೂ ತಲಾ ಇಬ್ಬರು ಮಹಿಳಾ ಮತ್ತು ಪುರುಷ ಬಾಡಿಗಾರ್ಡ್‌ಗಳು ಇರಬೇಕು ಎಂದು ಪೋಲೀಸರು ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ