ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರಪ್ಪಂದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವಿಸ್ ಖಂಡನೆ

ನಾಗ್ಪುರ :ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಂಬೈ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು ಯಾರಪ್ಪಂದಲ್ಲ ಎಂದು ಬುಧವಾರ ಹೇಳಿದ್ದಾರೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಕರ್ನಾಟಕದ ಕೆಲವು ನಾಯಕರು ಮಾಡಿದ ಟೀಕೆಗಳನ್ನು ಅವರು ಬಲವಾಗಿ ಖಂಡಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ಮರಾಠಿಗರ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದು ಸದನದಲ್ಲಿ ಹೇಳಿದರು.
ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ (ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ) ಅವರು ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಸಚಿವರು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಹೇಳಿದ್ದಾರೆ. ಅವರು ತಮ್ಮ ಹೇಳಿಕೆಗಳಿಂದ ಮಹಾರಾಷ್ಟ್ರದ ಹೆಮ್ಮೆಯನ್ನು ಘಾಸಿಗೊಳಿಸಿದ್ದಾರೆ. ಆದರೆ ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆ ಅದಕ್ಕೆ ತಕ್ಕ ಉತ್ತರವಾಗಿ ಇಲ್ಲ ಎಂದು ಟೀಕಿಸಿದ್ದರು.
ಕರ್ನಾಟಕದ ಕಾನೂನು ಸಚಿವ ಮಾಧುಸ್ವಾಮಿ ಅವರು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಭಾರತೀಯ ಜನತಾ ಪಕ್ಷದ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಮುಂಬೈ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಿದ್ದಾರೆ. ಅವರು ಮರಾಠಿ ಜನರ ಗಾಯದ ಮೇಲೆ ಉಪ್ಪು ಸವರಿದ್ದಾರೆ ಎಂದು ಅಜಿತ್‌ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರ ಶಾಸಕರು ಹಾಗೂ ಸಚಿವರಿಗೆ ಕರ್ನಾಟಕಕ್ಕೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಹೇಳಿದರು.ನಮ್ಮ ಮುಖ್ಯಮಂತ್ರಿಗಳು ಇದನ್ನು ತೀವ್ರವಾಗಿ ಖಂಡಿಸಬೇಕು ಎಂದು ಎನ್‌ಸಿಪಿ ನಾಯಕ ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

ಇದಕ್ಕೆ ಪ್ರತಿಕ್ರಿಯಿಸಿದ ಫಡ್ನವೀಸ್ ಮಾತನಾಡಿ, ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು ಯಾರ ಅಪ್ಪಂದಲ್ಲ. ಮುಂಬೈ ಮೇಲೆ ಯಾರೇ ಆದರೂ ಹಕ್ಕು ಸಾಧಿಸುವುದನ್ನು ನಾವು ಸಹಿಸುವುದಿಲ್ಲ ಮತ್ತು ನಾವು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವರ ಮುಂದೆ ನಮ್ಮ ಭಾವನೆಗಳನ್ನು ಮಂಡಿಸುತ್ತೇವೆ. ಅಂಥವರನ್ನು ವಾಗ್ದಂಡನೆಗೆ ಗುರಿ ಮಾಡುವಂತೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ವಿನಂತಿಸಲಾಗುವುದು ಎಂದು ಅವರು ಹೇಳಿದರು.
ಅಮಿತ್‌ ಶಾ ಜೊತೆ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಸಭೆಯಲ್ಲಿ ಎರಡೂ ರಾಜ್ಯಗಳು ವಿವಾದಾತ್ಮಕ ಹೇಳಿಕೆ ನೀಡುವುದನ್ನು ನಿರ್ಬಂಧಿಸಲಾಗಿತ್ತು ಎಂದು ಅವರು ಹೇಳಿದರು.
ಕರ್ನಾಟಕ ಶಾಸಕರು ಅಥವಾ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಗಳು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ವಿರುದ್ಧವಾಗಿವೆ. ಮುಂಬೈ ಮೇಲೆ ಯಾವುದೇ ಹಕ್ಕನ್ನು ನಾವು ಸಹಿಸುವುದಿಲ್ಲ. ಈ ಹೇಳಿಕೆಗಳನ್ನು ಖಂಡಿಸಿ ನಾವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಕರ್ನಾಟಕದ ನಾಯಕರು ನೀಡಿರುವ ಹೇಳಿಕೆಗಳು ಗೃಹ ಸಚಿವರೊಂದಿಗಿನ ಸಭೆಯಲ್ಲಿ ನಿರ್ಧರಿಸಿದ್ದಕ್ಕೆ ಅನುಗುಣವಾಗಿಲ್ಲ. ಇದನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದು ಫಡ್ನವೀಸ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಕರ್ನಾಟಕದಲ್ಲಿರುವ 865 ಮರಾಠಿ ಭಾಷಿಕ ಹಳ್ಳಿಗಳನ್ನು ಪ ಮಹಾರಾಷ್ಟ್ರಕ್ಕೆ ಸೇರಿಸುವುದನ್ನು ಕಾನೂನುಬದ್ಧವಾಗಿ ಮುಂದುವರಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು.
ಬೆಳಗಾವಿ, ಕಾರವಾರ ಬೀದರ್, ನಿಪಾಣಿ, ಭಾಲ್ಕಿ ನಗರಗಳು ಮತ್ತು ಕರ್ನಾಟಕದ 865 ಮರಾಠಿ ಭಾಷಿಕ ಗ್ರಾಮಗಳ ಪ್ರತಿ ಇಂಚಿನ ಭೂಮಿಯನ್ನು (ಮಹಾರಾಷ್ಟ್ರದಲ್ಲಿ) ಸೇರಿಸಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನುಬದ್ಧವಾಗಿ ಪ್ರಕರಣವನ್ನು ನಡೆಸಲಿದೆ ಎಂದು ಎಂಬ ನಿರ್ಣಯ ಮಂಡಿಸಲಾಯಿತು.
ಉಭಯ ಸದನಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಒಂದೇ ಒಂದು ಗ್ರಾಮವನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದರು. ಆದರೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮರಾಠಿ ಭಾಷಿಕ ಗ್ರಾಮಗಳನ್ನು ಸೇರಿಸುವ ಬಗ್ಗೆ ನೆರೆಯ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿರುವುದನ್ನು ಖಂಡಿಸಿದರು.
ಈ ವಿಷಯದಲ್ಲಿ ಇಡೀ ರಾಜ್ಯ ಒಗ್ಗಟ್ಟಾಗಿದೆ, ಮಹಾರಾಷ್ಟ್ರ ಶಾಸಕಾಂಗವು ಅಂಗೀಕರಿಸಿದ ನಿರ್ಣಯವನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ವಿರೋಧಿಸುತ್ತದೆ ಎಂದು ಅವರು ಹೇಳಿದರು.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement