ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಆರಂಭಿಕ ತಯಾರಿ ಶುರು ಮಾಡಿದ್ದು, ತಯಾರಿ ನಡೆಯುತ್ತಿರುವ ವೇಳೆಯೇ ವೇಳೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಲಿದ್ದಾರೆ.
ಅವರು ಡಿಸೆಂಬರ್ 30 ರಂದು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ. ಈ ವೇಳೆ ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆಯೂ ಪೂರ್ಣ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಡ್ಯ ಕಾಲೇಜು ಆವರಣದಲ್ಲಿ ಡಿಸೆಂಬರ್ 30ರಂದು ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಡಿಸೆಂಬರ್ 29ರಂದು ರಾತ್ರಿ 10 ಗಂಟೆಗೆ ಯಲಹಂಕ ವಾಯು ನೆಲೆಗೆ ಆಗಮಿಸಲಿರುವ ಅಮಿತ್ ಶಾ ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿಸೆಂಬರ್ 30ರಂದು ಬೆಳಿಗ್ಗೆ 10ರಿಂದ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಲಿದ್ದಾರೆ. ಅಂದು ಮಧ್ಯಾಹ್ನ 1:45 ಕ್ಕೆ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ ಮಾಡಲಿರುವ ಅವರು, ಬಳಿಕ ಸಂಜೆ 5:45 ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಹಕಾರ ವಲಯದ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಅಂದು ರಾತ್ರಿ 8 ರಿಂದ ಪಕ್ಷದ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.
ಡಿಸೆಂಬರ್ 31ರಂದು ಬೆಳಿಗ್ಗೆ 10:55 ಕ್ಕೆ ದೇವನಹಳ್ಳಿಯ ಆವತಿಯಲ್ಲಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅವರು, ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರದಲ್ಲಿ ಸೌಹಾರ್ದ ಸಹಕಾರ ಮಂಡಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ರಿಂದ ಬಿಜೆಪಿ ಬೂತ್ ಅಧ್ಯಕ್ಷರು, ಬೂತ್ ಏಜೆಂಟರ ಜೊತೆ ಸಭೆ ನಡೆಸಲಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ