ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್‌ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ವಿದ್ಯುತ್‌ ನಿಗಮಗಳಾದ ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲಕುಮಾರ ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಟಿಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಸ್ಕರಿಸಿ ಆದೇಶ ಹೊರಡಿಸಲಾಗಿತ್ತು. ಹೆಚ್ಚಳಕ್ಕೆ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement