ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ.
ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು.
ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ ಆಗುವ ಮೊದಲೇ ಕುಮಟಾದ ಕೋರ್ಟ್ ರಸ್ತೆಯಲ್ಲಿ ಷೇರು ಬ್ರೋಕರ್ ಆಗಿ ಅವರು ತಮ್ಮ ಛಾಪು ಮೂಡಿಸಿದ್ದರು. ಕುಮಟಾದಲ್ಲಿ ಬಂಡವಾಳ ಮಾರುಕಟ್ಟೆ, ಷೇರುಗಳು, ಡಿಬೆಂಚ್ರರ್ ವಹಿವಾಟು ಬಗ್ಗೆ ಹೆಚ್ಚಿನ ತಿಳಿವಳಿಕೆ ನೀಡುವವರು ಎಂದರೆ ಮೋಂಟಿ ಫಾರ್ನಾಂಡಿಸ್ ಎಂಬಷ್ಟರಮಟ್ಟಿಗೆ ಅವರು ಹೆಸರುಗಳಿಸಿದ್ದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದ್ದ ಅವರು ತಾಲೂಕಿನ ಶೈಕ್ಷಣಿಕ ಅನೇಕ ಸಂಘ ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಸಂತಾಪ: ಮೋಂಟಿ ಫರ್ನಾಂಡಿಸ್‌ ಅವರು ಉತ್ತಮ ನಡವಳಿಕೆಯ ಸರಳ ವ್ಯಕ್ತಿ ಹಾಗೂ ಸ್ನೇಹಜೀವಿಯಾಗಿದ್ದರು. ಜನಪರ ಕಾಳಜಿಯುಳ್ಳ ಸುಸಂಸ್ಕೃತ ವ್ಯಕ್ತಿಯಾಗಿದ್ದರು. ಕಾಂಗ್ರೆಸ್‌ ಪಕ್ಷದ ಹಿರಿಯ ಸದಸ್ಯರಾಗಿದ್ದರು. ಅವರು ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವಹೊಂದಿದ್ದರು. ಅವರು ನಿಧನರಾಗಿರುವುದು ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement