ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ ಅಂಬಾನಿ ಇಂದು, ಗುರುವಾರ ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥಜಿ ದೇವಸ್ಥಾನದಲ್ಲಿ ಇವರಿಬ್ಬರ ಸಾಂಪ್ರದಾಯಿಕ ರೋಕಾ ಸಮಾರಂಭ ನಡೆಯಿತು. ರಾಧಿಕಾ ಮರ್ಚಂಟ್ ಅವರು, ಔಷಧೀಯ ತಯಾರಿಕಾ ಕಂಪನಿಯ ಸಿಇಒ ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ. ನಿರ್ದೇಶಕ-, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕರಾದ ಪರಿಮಳ ನಾಥ್ವಾನಿ ಅವರು ಟ್ವೀಟರ್‌ನಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ..
ರಾಧಿಕಾ ಅವರು ಭರತನಾಟ್ಯ ನೃತ್ಯಪಟುವಾಗಿದ್ದು, ಜೂನ್‌ನಲ್ಲಿ, ಮುಕೇಶ ಅಂಬಾನಿ ಮತ್ತು ಪತ್ನಿ ನೀತಾ ಅಂಬಾನಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ರಾಧಿಕಾ ಮರ್ಚೆಂಟ್‌ನ ಅರಂಗೇಟ್ರಂ ಸಮಾರಂಭ ಆಯೋಜಿಸಿದ್ದರು. ಅರಂಗೇಟ್ರಂ ಎಂಬುದು ಶಾಸ್ತ್ರೀಯ ನೃತ್ಯದಲ್ಲಿ ಅವರ ಔಪಚಾರಿಕ ತರಬೇತಿಯನ್ನು ಪೂರ್ಣಗೊಳಿಸಿದ ನೃತ್ಯಪಟುವಿನ ರಂಗ ಪ್ರವೇಶವಾಗಿದೆ.
ಅನಂತ್ ಮತ್ತು ರಾಧಿಕಾ ಕೆಲವು ವರ್ಷಗಳಿಂದ ಪರಸ್ಪರ ಪರಿಚಿತರು. ಅನಂತ ಅವರು ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಿಂದ ತಮ್ಮ ಅಧ್ಯಯನ ಪೂರ್ಣಗೊಳಿಸಿದರು ಮತ್ತು ಜಿಯೋ ಪ್ಲಾಟ್‌ಫಾರ್ಮ್‌ಗಳು ಮತ್ತು ರಿಲಯನ್ಸ್ ರಿಟೇಲ್ ವೆಂಚರ್ಸ್‌ನ ಮಂಡಳಿಗಳಲ್ಲಿ ಸದಸ್ಯ ಸೇರಿದಂತೆ ವಿವಿಧ ಹಂತಗಳಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಪ್ರಸ್ತುತ RIL ನ ಇಂಧನ ವ್ಯವಹಾರವನ್ನು ಮುನ್ನಡೆಸುತ್ತಿದ್ದಾರೆ. ರಾಧಿಕಾ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ ಹಾಗೂ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಎನ್ಕೋರ್ ಹೆಲ್ತ್‌ಕೇರ್ ಮಂಡಳಿಯಲ್ಲಿ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ