ಲಿಂಗಾಯತ ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ: ಇದಕ್ಕಾಗಿ ಪ್ರತ್ಯೇಕ ಪ್ರವರ್ಗ 2C, 2D ರಚನೆಗೆ ರಾಜ್ಯ ಸಂಪುಟ ಸಭೆ ತೀರ್ಮಾನ

ಬೆಳಗಾವಿ : ಕರ್ನಾಟಕದ ಎರಡು ಪ್ರಬಲ ಸಮುದಾಯದವಾಗಿರುವ ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಕೆಟಗರಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪ್ರಬಲ ಸಮುದಾಯಗಳಾದ ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ 2A ಕೆಟಗರಿಯಲ್ಲಿ ಸೇರುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಸರ್ಕಾರ 2C ಮತ್ತು 2D ಕೆಟಗರಿ ರಚಿಸುವ ಮೂಲಕ ಚುನಾವಣೆ ಹೊತ್ತಲ್ಲಿ ಎರಡು ಪ್ರಬಲ ಸಮುದಾಯಗಳ ಮೀಸಲಾತಿ ಬೇಡಿಕೆ ಪರಿಹರಿಸಲು ಈ ಹೊಸ ಸೂತ್ರ ಮಾಡಿದೆ.
ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಈ ಎರಡು ಸಮುದಾಯಗಳಿಗೆ ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ ಹಾಗೂ ಇದಕ್ಕಾಗಿ ಎರಡು ಕೆಟಗರಿಗಳನ್ನು ಸೃಷ್ಟಿ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ತಿಳಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿ ಸಚಿವ ಸಂಪುಟ ಈ ನಿರ್ಧಾರ ತೆಗೆದುಕೊಂಡಿದೆ. ಹಾಗೂ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾದ ಎಲ್ಲ ಸೌಲಭ್ಯಗಳು ನೀಡಲಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಈವರೆಗೆ 3ಬಿ ಕೆಟಗರಿಯಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿ ರಚಿಸಲು ಹಾಗೂ 3ಎ ಕೆಟಗರಿಯಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ಕೆಟಗರಿ ಮಾಡಲು ಇಂದು ಗುರುವಾರ (ಡಿಸೆಂಬರ್ 29) ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ಪಂಚಮಸಾಲಿಗಳು 3Bಯಿಂದ 2Dಗೆ ಬರಲಿದ್ದಾರೆ ಹಾಗೂ ಒಕ್ಕಲಿಗರು 3Aಯಿಂದ 2C ಬರಲಿದ್ದಾರೆ. ಆದರೆ ಮೀಸಲಾತಿ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ.
3ಎನಲ್ಲಿದ್ದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಸಮ್ಮತಿಸಲಾಗಿದೆ. ಇನ್ನು 3ಬಿನಲ್ಲಿದ್ದ ಲಿಂಗಾಯತ ಪಂಚಮಸಾಲಿಗಳಿಗೆ 2ಡಿ ಮೀಸಲಾತಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ. 2Aನಲ್ಲಿರುವ 102 ಪಂಗಡಗಳ ಮೀಸಲಾತಿಗೆ ಯಾವುದೇ ಧಕ್ಕೆ ಆಗುವುದಿಲ್ಲ. 2ಎ ನಲ್ಲಿರುವ 102 ಪಂಗಡಗಳ ಮೀಸಲಾತಿಗೂ ತೊಂದರೆಯಾಗುವುದಿಲ್ಲ. ಯಾವುದೇ ಸಮುದಾಯದ ಮೀಸಲಾತಿಯಲ್ಲಯೂ ಬದಲಾವಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

4.6 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement