ಐಪಿಎಸ್ ಅಧಿಕಾರಿ ಆರ್.ದಿಲೀಪ್ ನಿಧನ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಆರ್. ದಿಲೀಪ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು, ಶುಕ್ರವಾರ ನಿಧನ ಹೊಂದಿದ್ದಾರೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿಯಾಗಿದ್ದ ದಿಲೀಪ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಯಕೃತ್ತು ಕಸಿ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅಪೋಲೊ ಅಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು, ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಮೈಸೂರು ಡಿಸಿಪಿಯಾಗಿ, ಉತ್ತರ ಕನ್ನಡ ಜಿಲ್ಲೆ ಹಾಗೂ ಧಾರವಾಡ ಜಿಲ್ಲೆ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

4 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement