ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕ ಇಲ್ಲ, ಇದನ್ನು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ : ಎಚ್ ಕೆ ಪಾಟೀಲ

posted in: ರಾಜ್ಯ | 0

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ದಿನಾಂಕ ಇಲ್ಲದಿದ್ದರೆ ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ. ಇದು ನಿರ್ಗತಿಕ ಕೂಸಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ ಪ್ರಶ್ನಿಸಿದ್ದಾರೆ.
ಇಂದು, ಶುಕ್ರವಾರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಹೊರಡಿಸುವ ಯಾವುದೇ ಆದೇಶದ ಪ್ರತಿಗೆ ದಿನಾಂಕ ಇದ್ದೇ ಇರುತ್ತದೆ. ಆದರೆ ಈ ಆದೇಶದಲ್ಲಿ ಯಾವುದೇ ದಿನಾಂಕ ಇಲ್ಲ. ಜನರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸಚಿವರು ದಿನಾಂಕವೇ ಇಲ್ಲದ ಆದೇಶದ ಪ್ರತಿಯನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಅದನ್ನೇ ಸದನದಲ್ಲಿ ಪ್ರದರ್ಶಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಜನರನ್ನು ದಾರಿ ತಪ್ಪಿಸಲು ಬಿಜೆಪಿ ಇಂತಹ ತಂತ್ರಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಕೆಲಸ ಆರಂಭ ಮಾಡಬೇಕಾದ ವೇಳೆ ಡಿಪಿಆರ್ ಅನುಮತಿ ಬಗ್ಗೆ ಮಾತನಾಡುತ್ತಿರುವುದು ಏಕೆ..? ಬಿಜೆಪಿಯವರಿಗೆ ಯೋಜನೆ ಬಗ್ಗೆ ನೈಜ ಕಾಳಜಿ ಇದ್ದಿದ್ದರೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಿತ್ತು. ಅದನ್ನು ಯಾಕೆ ಪಡೆದಿಲ್ಲ ಎಂದು ಪ್ರಶ್ನಿಸಿದ ಅವರು, ಅದನ್ನು ಪಡೆದಿದ್ದರೆ ಯೋಜನೆ ಒಂದು ಹಂತ ಮುಂದೆ ಹೋಗಿದೆ ಎಂದು ಹೇಳಬಹುದಿತ್ತು. ಆದರೆ ಅದೆಲ್ಲ ಬಿಟ್ಟು ಪರಿಷ್ಕೃತ ಡಿಪಿಆರ್‌ ಸಲ್ಲಿಸಿ ಅದಕ್ಕೆ ಅನುಮತಿ ಪಡೆದು ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
2002ರಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಸ್ಥಳದಲ್ಲಿ ಈಗಾಗಲೇ ಕಾಮಗಾರಿ ಸಹ ಆರಂಭವಾಗಿದೆ. ಈಗ ಡಿಪಿಆರ್ ಅನುಮತಿ ನೀಡಲಾಗಿದೆ ಎಂದು ಹೇಳಿದ್ದು ನೋಡಿದರೆ ಈ ಮೊದಲು ಡಿಪಿಆರ್‌ ಇಲ್ಲದೆಯೇ ಕಾಮಗಾರಿ ನಡೆದಿದೆಯೇ..? ಯೋಜನೆ ಕೆಲಸದ ಹಂತದಲ್ಲಿರುವಾಗ ಡಿಪಿಆರ್ ಬಗ್ಗೆ ಮಾತನಾಡುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಪರಿಷಕ್ ಎಂದು ಸರ್ಕಾರ ವಿರುದ್ಧ ಎಚ್. ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಜನವರಿ 2ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮಹದಾಯಿ ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿಯವರು ಇಂಥ ನಾಟಕ ಮಾಡುತ್ತಿದ್ದಾರೆ. ಯೋಜನೆ ಅನುಮತಿ ಪಡೆದ ನಂತರವೂ ಡಿಪಿಆರ್‌ ಅನುಮತಿ ಪಡೆದ ಬಗ್ಗೆ ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಹಾಗೂ ಜನರನ್ನು ದಿಕ್ಕುತಪ್ಪಿಸುವ ತಂತ್ರವಾಗಿದೆ ಎಂದು ಎಚ್‌.ಕೆ.ಪಾಟೀಲ ವಾಗ್ದಾಳಿ ನಡೆಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ ; ಮತ್ತೆ ಬಂಧನದ ಭೀತಿ

ನಮ್ಮ ಅಧಿಕಾರಾವಧಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಕುಡಿಯುವ ನೀರಿಗಾಗಿ ಬಳಕೆ ಎನ್ನುವ ಅನುಮತಿಯೂ ದೊರೆತಿತ್ತು. ಗೋವಾ ಮುಖ್ಯಮಂತ್ರಿ ತಪ್ಪು ಮಾಹಿತಿಯಿಂದ ನಮಗೆ ದೊರೆತಿದ್ದ ಕ್ಲಿಯರೆನ್ಸ್ ಸ್ಥಗಿತಗೊಂಡಿತ್ತು. ಗೋವಾದವರಿಂದ ಸಭೆಗಳ ಮುಂದೂಡಿಕೆ ಕಾರ್ಯ ನಡೆದು ನ್ಯಾಯಾಲಯದ ಮೆಟ್ಟಿಲೇರಿ ನಂತರ ಟ್ರಿಬ್ಯುನಲ್ ಸ್ಥಾಪನೆ ಆಯ್ತು, ಅಲ್ಲಿಂದ ಇಲ್ಲಿಯವರೆಗೂ ಏನೂ ಮಾಡಿರದ ಬಿಜೆಪಿ ನವಂಬರ್‍ನಲ್ಲಿ ಡಿಪಿಆರ್ ಸಿದ್ಧ ಮಾಡಿಕೊಂಡಿತ್ತು ಎಂದು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement