ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಭಾರತದ ವಿಕೆಟ್‌ ಕೀಪರ್‌-ಬ್ಯಾಟರ್‌ ರಿಷಬ್ ಪಂತಗೆ ಗಂಭೀರ ಗಾಯ

ನವದೆಹಲಿ: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್‌ ರಿಷಬ್ ಪಂತ್ ದೆಹಲಿಯಿಂದ ಉತ್ತರಾಖಂಡಕ್ಕೆ ಹಿಂತಿರುಗುತ್ತಿದ್ದಾಗ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ನರ್ಸನ್ ಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.
ದೆಹಲಿ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಾಗ ಅವರೇ ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿ ಪಂತ್ ಒಬ್ಬರೇ ಇದ್ದರು. ಕಾರು ರಸ್ತೆಯಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ. ಅವರ ತಲೆ, ಬೆನ್ನು ಮತ್ತು ಕಾಲಿಗೆ ಗಾಯಗಳಾಗಿವೆ. ರೂರ್ಕಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪಂತ್‌ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಗಾಗಿ ಡೆಹ್ರಾಡೂನ್‌ನ ಮ್ಯಾಕ್ಸ್‌ ಆಸ್ಪತ್ರೆಗೆ ಕಳುಹಿಸಲಾಯಿತು. ಅವರ ತಲೆ, ಬೆನ್ನು ಮತ್ತು ಪಾದಗಳಿಗೆ ಗಾಯಗಳಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕ್ರಿಕೆಟರ್ ರಿಷಬ್ ಪಂತ್ ಮೂಳೆಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಕರ ನಿಗಾದಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ. ಅವರು ಪರೀಕ್ಷಿಸಿದ ನಂತರ ಅವರ ವಿವರವಾದ ವೈದ್ಯಕೀಯ ಬುಲೆಟಿನ್ ಅನ್ನು ಬಿಡುಗಡೆ ಮಾಡಲಾಗುತ್ತದೆ. ನಂತರ, ನಾವು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಡೆಹ್ರಾಡೂನ್ ಮಾಕ್ಸ್‌ ಆಸ್ಪತ್ರೆ ಡಾ. ಆಶಿಶ್ ಯಾಗ್ನಿಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಬ್ ಪಂತ್ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ರಿಷಬ್‌ ಪಂತ್ ಇದುವರೆಗೆ 33 ಟೆಸ್ಟ್‌ಗಳಲ್ಲಿ ಐದು ಶತಕ ಮತ್ತು 11 ಅರ್ಧಶತಕಗಳನ್ನು ಬಾರಿಸಿದ್ದು, 2,271 ರನ್ ಗಳಿಸಿದ್ದಾರೆ. ಅವರು 30 ODI ಮತ್ತು 66 T20I ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement