ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕದ ಕೊಂಕೇರಿಯವರಾದ ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ (87) ಕೊಂಕೇರಿ ಶನಿವಾರ ನಿಧನರಾದರು.
ಕಾರವಾರದ ಪ್ರತಿಷ್ಠಿತ ದಿವೇಕರ ಕಾಲೇಜಿನ ಪ್ರಥಮ ಪ್ರಾಚಾರ್ಯರಾಗಿದ್ದರು ಸತತವಾಗಿ 23 ವರ್ಷ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ತಮ್ಮ ಮೂಲ ಮನೆ ಕಡತೋಕದಲ್ಲಿ ನೆಲೆಸಿ ಅನೇಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರ ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗ ಹಾಗೂ ಶಿಷ್ಯಂದಿರನ್ನು ಅಗಲಿದ್ದಾರೆ.
ನಿಧನಕ್ಕೆ ಸಂತಾಪ: ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ (87) ಕೊಂಕೇರಿ ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಕಾಂಗ್ರೆಸ್ ಮುಖಂಡ ಶಿವಾನಂದ ಹೆಗಡೆ ಕಡತೋಕ, ಗುಡೆ ಅಂಗಡಿ ಹವ್ಯಕ ವಲಯದ ಎನ್. ವಿ. ಹೆಗಡೆ ಮೊದಲಾದವರ ಕಂಬನಿ ಮಿಡಿದಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ