ಅಥಣಿ : ಜೆಡಿಎಸ್‌ ಮುಖಂಡನ ಕಾರು ಪಲ್ಟಿ ; 6 ಜನರಿಗೆ ಗಾಯ

ಬೆಳಗಾವಿ : ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕಾರಿನಲ್ಲಿ ಶುಕ್ರವಾರ ರಾತ್ರಿ ಹೋಗುತ್ತಿದ್ದರು. ಲಾರಿ ಅಥಣಿಯಿಂದ ವಿಜಯಪುರದ ಕಡೆ ಸಾಗುತ್ತಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement