ನಾರ್ಕೋ ಅನಾಲಿಸಿಸ್ ಪರೀಕ್ಷೆ : ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ ನಂತರ ಆಕ್ರೋಶದ ಭರದಲ್ಲಿ ಶ್ರದ್ಧಾಳನ್ನು ಕೊಂದೆ ಎಂದು ಪೊಲೀಸರಿಗೆ ತಿಳಿಸಿದ ಅಫ್ತಾಬ್ ಪೂನಾವಾಲಾ

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಅವರ ನಾರ್ಕೋ ಅನಾಲಿಸಿಸ್ ಪರೀಕ್ಷೆ ಪೂರ್ಣಗೊಂಡಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಶ್ರದ್ಧಾ ವಾಕರ್ ಹತ್ಯೆಯ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಪ್ರಕಾರ, ಗುರುವಾರ ರೋಹಿಣಿಯಲ್ಲಿರುವ ಆಸ್ಪತ್ರೆಯಲ್ಲಿ ಪೂನಾವಾಲಾ ಸುಮಾರು ಎರಡು ಗಂಟೆಗಳ ಕಾಲ ನಾರ್ಕೋ-ಅನಾಲಿಸಿಸ್ ಪರೀಕ್ಷೆಗೆ ಒಳಗಾಗಿದ್ದರು. ಬಿಟ್ಟು ಹೋಗುವುದಾಗಿ ಬೆದರಿಕೆ … Continued

ಕಾಂತಾರದ ‘ವರಾಹರೂಪಂ’ ಹಾಡಿನ ವಿವಾದ: ಥೈಕ್ಕುಡಂ ಬ್ರಿಜ್‌ ದಾವೆ ತಿರಸ್ಕರಿಸಿದ್ದ ಕೋಝಿಕ್ಕೋಡ್‌ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ

ʼವರಾಹ ರೂಪಂʼ ಹಾಡನ್ನು ಕಾಂತಾರ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಹೊಂಬಾಳೆ ಫಿಲ್ಮ್ಸ್‌ ವಿರುದ್ಧ ಥೈಕ್ಕುಡಂ ಬ್ರಿಜ್‌ ಸಂಗೀತ ತಂಡ ಹೂಡಿದ್ದ ದಾವೆಯನ್ನು ತಿರಸ್ಕರಿಸಿದ್ದ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯ ಆದೇಶಕ್ಕೆ ಗುರುವಾರ ಕೇರಳ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಸೋಮರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು … Continued

ಜೆಎನ್‌ಯು ಕ್ಯಾಂಪಸ್ ಗೋಡೆಗಳಲ್ಲಿ ಬ್ರಾಹ್ಮಣ-ಬನಿಯಾ ವಿರೋಧಿ ಬರಹ : ತನಿಖೆಗೆ ಆದೇಶ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಮ್ಮೆ ವಿವಾದ ಭುಗಿಲೆದ್ದಿದ್ದು, ಕ್ಯಾಂಪಸ್‍ನ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳ ವಿರುದ್ಧ ಘೋಷಣೆಗಳನ್ನು (Anti-Brahmin Slogans) ಬರೆಯಲಾಗಿದೆ. ಭಾಷಾ ಮತ್ತು ಸಾಹಿತ್ಯ ಶಾಲೆಯ ಎರಡನೇ ಮತ್ತು ಮೂರನೇ ಮಹಡಿಗಳ ಗೋಡೆಗಳು ಮತ್ತು ಹಲವಾರು ಅಧ್ಯಾಪಕರ ಬಾಗಿಲುಗಳ ಮೇಲೆ ಆಕ್ಷೇಪಾರ್ಹ ಬರಹಗಳನ್ನು ಬರೆಯಲಾಗಿದೆ. ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳ … Continued

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದು, ಹೋರರೀಗಿಯಾಗಿಯೇ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದು, ಇಂದು … Continued

ತಿಹಾರ್ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆಯಲು ಅಧಿಕೃತ ಸ್ಥಾನ ದುರುಪಯೋಗಪಡಿಸಿಕೊಂಡ ಸತ್ಯೇಂದ್ರ ಜೈನ್ : ತನಿಖಾ ಸಮಿತಿ

ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸತ್ಯೇಂದ್ರ ಜೈನ್ ಅವರಿಗೆ ವಿವಿಐಪಿ ಸೌಲಭ್ಯ ನೀಡಲಾಗಿದೆ ಎಂದು ಆರೋಪಿಸಿ ತನಿಖಾ ಸಮಿತಿಯ ವರದಿಯಲ್ಲಿ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಪ್ರಧಾನ ಕಾರ್ಯದರ್ಶಿ (ಗೃಹ), ಪ್ರಧಾನ ಕಾರ್ಯದರ್ಶಿ (ಕಾನೂನು) ಮತ್ತು ಕಾರ್ಯದರ್ಶಿ (ವಿಜಿಲೆನ್ಸ್) ಅವರನ್ನು ಒಳಗೊಂಡ ಸಮಿತಿಯು ದೆಹಲಿ ಸತ್ಯೇಂದ್ರ ಜೈನ್‌ ಜೈಲಿನ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಜೈಲಿನಲ್ಲಿ … Continued

ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಂಡ್ಯ: ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ವಿಷವುಣಿಸಿ ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ತಾಯಿ ಉಸ್ನಾ ಕೌಸರ್‌, ತನ್ನ ಮಕ್ಕಳಾದ ಹಾರಿಸ್‌(7), ಆಲಿಸಾ (4), ಫಾತಿಮಾ(2)ಗೆ ವಿಷವುಣಿಸಿ ಅವರು ಸಾವಿಗೀಡಾದ ನಂತರ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೃತ್ತಿಯಲ್ಲಿ ಕಾರ್ … Continued

ತಪ್ಪಿನ ವಿರುದ್ಧ ಮತ್ತೆ ಹೋರಾಡುತ್ತೇನೆ: ತನ್ನ ಅತ್ಯಾಚಾರಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿಲ್ಕಿಸ್ ಬಾನೊ

ನವದೆಹಲಿ: 2002ರಲ್ಲಿ ನಡೆದ ತನ್ನ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬದ ಏಳು ಸದಸ್ಯರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳ ಕ್ಷಮಾಪಣೆ ಮತ್ತು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿರುವ ಬಿಲ್ಕಿಸ್ ಬಾನೊ, “ನಾನು ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದರ ವಿರುದ್ಧ ಮತ್ತೆ ಹೋರಾಡುತ್ತೇನೆ ಎಂದು ಹೇಳಿದ್ದಾರೆ. . ಗೋಧ್ರಾ … Continued

ಗುಜರಾತ್ ವಿಧಾನಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಕ್ತಾಯ: ಸಂಜೆ 5ರವರೆಗೆ 59.2% ಮತದಾನ

ಅಹಮದಾಬಾದ್‌: ಗುಜರಾತ್ ಚುನಾವಣೆಯ ಮೊದಲ ಹಂತದ 89 ವಿಧಾನಸಭಾ ಕ್ಷೇತ್ರಗಳಲ್ಲಿ ಗುರುವಾರ ಸಂಜೆ 5 ಗಂಟೆಯವರೆಗೆ ಸರಾಸರಿ 59.24 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಸಂಜೆ 5 ಗಂಟೆಗೂ ಮುನ್ನವೇ ಮತದಾರರು ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದ ಮತಗಟ್ಟೆಗಳಲ್ಲಿ ಪ್ರಕ್ರಿಯೆ … Continued

ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ತೆರೆಯುವ ಪ್ರಸ್ತಾಪವಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗಾಗಿ 10 ಕಾಲೇಜುಗಳನ್ನು ತೆರೆಯಲು ಕರ್ನಾಟಕ ಸರ್ಕಾರವು ವಕ್ಫ್ ಮಂಡಳಿಗೆ ಒಪ್ಪಿಗೆ ನೀಡಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಆಡಳಿತದ ಯಾವುದೇ ಮಟ್ಟದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಗುರುವಾರ ಹೇಳಿದ್ದಾರೆ. ಇದು ವಕ್ಫ್ ಮಂಡಳಿಯ ಅಧ್ಯಕ್ಷರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು ಮತ್ತು ಅವರ ಸರ್ಕಾರದ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued