ದೆಹಲಿ ಶಾಕರ್: ಡಿಕ್ಕಿ ಹೊಡೆದ ನಂತರ 12 ಕಿಮೀ ಎಳೆದೊಯ್ದ ಕಾರು, ಯುವತಿ ಸಾವು

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಯುವತಿಯೊಬ್ಬಳ ಸ್ಕೂಟರ್ (Scooter) ಅಪಘಾತಕ್ಕೀಡಾಗಿದ್ದು, ಆಕೆಯನ್ನು ಕಾರು ಸುಮಾರು 12 ಕಿಮೀ ವರೆಗೂ ಎಳೆದೊಯ್ದಿದ್ದು, ತೀವ್ರವಾಗಿ ಗಾಯಗೊಂಡ ಯುವತಿ ಸಾವಿಗೀಡಾದ ಘಟನೆ ದೆಹಲಿಯಲ್ಲಿ ನಡೆದಿದೆ. ಶನಿವಾರ ಮಧ್ಯ ರಾತ್ರಿ ದೆಹಲಿಯ ಹೊರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಂಜಲಿ ಚಲಿಸುತ್ತಿದ್ದ ಸ್ಕೂಟಿಯು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಚಕ್ರಕ್ಕೆ … Continued

ಚಂದ್ರಬಾಬು ನಾಯ್ಡು ಸಮಾವೇಶದಲ್ಲಿ ಮತ್ತೊಂದು ದುರಂತ, ಸೀರೆ ಪಡೆಯಲು ನೂಕುನುಗ್ಗಲು ಉಂಟಾಗಿ 3 ಮಹಿಳೆಯರು ಸಾವು

ಗುಂಟೂರು: ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಮಂದಿ ಮೃತಪಟ್ಟ ಬೆನ್ನಲ್ಲೇ ಬೆನ್ನಲ್ಲೇ ಭಾನುವಾರ (ಜನವರಿ 1) ಸಂಕ್ರಾಂತಿ ಹಬ್ಬದ ಅಂಗವಾಗಿ ಚಂದ್ರಬಾಬುನಾಯ್ಡು ಅವರು ಸೀರೆ ಹಂಚುತ್ತಿದ್ದ ಕಾರ್ಯಕ್ರಮದಲ್ಲಿ ಮತ್ತೆ 3 ಮಹಿಳೆಯರು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ. ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಈ ದುರಂತ ಸಂಭವಿಸಿದೆ. ತೆಲುಗುದೇಶಂ … Continued

2023ರಲ್ಲಿ ಸರಣಿ ವಿಧಾನಸಭೆ ಚುನಾವಣೆಗಳು : ಇದು ಲೋಕಸಭಾ ಚುನಾವಣೆ ಮುನ್ನ ‘ಸೆಮಿಫೈನಲ್’..?

ನವದೆಹಲಿ: 2023 ರಲ್ಲಿ ಭಾರತದ ಹಲವಾರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಈ ವರ್ಷ ಚುನಾವಣೆಗೆ ಹೋಗುತ್ತವೆ, ಜೊತೆಗೆ ಈಶಾನ್ಯದ ಕೆಲ ರಾಜ್ಯಗಳು ಸಹ ಚುನಾವಣೆಗೆ ಹೋಗಲಿವೆ. ವಿಧಾನಸಭೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯಗಳೆಂದರೆ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ. ಫೆಬ್ರುವರಿ-ಮಾರ್ಚ್‌ನಲ್ಲಿ ವಿಧಾನಸಭೆ ಆ … Continued

ಅಮೂಲ್ ಜೊತೆ ನಂದಿನಿ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(KMF)ದ ನಂದಿನಿ ಉತ್ಪನ್ನವನ್ನು ಗುಜರಾತಿನ ಅಮೂಲ್ ಜೊತೆಗೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಂದಿನಿ ವಿಲೀನವಾಗುತ್ತದೆ ಎಂದು ಯಾರೂ ಊಹೆ ಮಾಡಿ ಏನೇನೋ ಹೇಳಬಾರದು ನಂದಿನಿ ಉತ್ಪನ್ನವನ್ನು ಅಮೂಲ್ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. … Continued

ಮೀನು ಹಿಡಿಯಲು ಹೋಗಿದ್ದ ತಂದೆ ಮಗನ ಮೇಲೆ ಕಾಡಾನೆ ದಾಳಿ: ತಂದೆ ಸಾವು, ಮಗನಿಗೆ ಗಂಭೀರ ಗಾಯ

posted in: ರಾಜ್ಯ | 0

ಮಂಗಳೂರು : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ಹೋಗಿದ್ದ ವೇಳೆ ಒಂಟಿ ಸಲಗದ ದಾಳಿಯಿಂದ ತಂದೆ ಮೃತಪಟ್ಟಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ ಶನಿವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ (45) ಎಂದು ಗುರುತಿಸಲಾಗಿದೆ. ಅವರ ಪುತ್ರ … Continued

ವಿದೇಶಿ ಪ್ರಯಾಣಿಕರಿಗೆ 7 ದಿನ ಕ್ವಾರಂಟೈನ್

posted in: ರಾಜ್ಯ | 0

ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಹೊರ ದೇಶಗಳಿಂದ ಬರುವ ಪ್ರಯಾಣಿಕರನ್ನು 7 ದಿನ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಜತೆಗೆ, ಕೋವಿಡ್ ಸ್ಯಾಂಪಲ್ಸ್ ತೆಗೆದುಕೊಂಡು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲು ಮುಂದಾಗಿದೆ. ಕೆಲವು ದೇಶಗಳಲ್ಲಿ ಕೋವಿಡ್‌ ಕ್ರಮಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಆದ್ಯತೆ ನೀಡಬೇಕು ಎಂದುತಿಳಿಸಲಾಗಿದೆ. ಚೀನಾ, ಹಾಂಗ್‌ಕಾಂಗ್, ಜಪಾನ್, … Continued

ನೂತನ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ

posted in: ರಾಜ್ಯ | 0

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇತ್ತೀಚೆಗೆ ಘೋಷಿಸಿರುವ ನೂತನ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟವನ್ನು ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಬೆಣಕಲ್ ಗ್ರಾಮದಲ್ಲಿ ಭಾನುವಾರ ಅನಾವರಣ ಮಾಡಿದ್ದಾರೆ. ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಗೆ ಪ್ರವೇಶ ನಿಷೇಧ ಆಗಿರುವ ಕಾರಣ ಅಲ್ಲಿ ಅವರ ಪತ್ನಿ ರಾಜಕೀಯದ ಅಖಾಡಾಕ್ಕೆ ಇಳಿದಿದ್ದಾರೆ. ಬಾವುಟದಲ್ಲಿ ಹಸ್ತಲಾಘವ … Continued

ಅಂಕೋಲಾ: ಹೊಸವರ್ಷದ ಮೊದಲ ದಿನವೇ ಭೀಕರ ಅಪಘಾತ, ನಾಲ್ವರು ಸಾವು

posted in: ರಾಜ್ಯ | 0

ಅಂಕೋಲಾ: ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೊರವಲಯದ ಬಾಳೆಗುಳಿ ಕ್ರಾಸ್‌ ಸಮೀಪದ ವರದರಾಜ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು  ಮೃತಪಟ್ಟವರು ತಮಿಳುನಾಡು ಮೂಲದವರು. ಮೃತರನ್ನು ಅರುಣ ಪಾಂಡ್ಯನ್, ನಿಫುಲ್, … Continued

ಮೀಸಲಾತಿ ಘೋಷಣೆ: ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿಯಿಂದ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ-ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿ ನಂತರ ಎಲ್ಲ ಸ್ಪಷ್ಟತೆಯೂ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ನೀಡಿದೆ. ಆಯೋಗವು … Continued

ಮಹಿಳಾ ಕೋಚ್‌ಗೆ ಲೈಂಗಿಕ ಕಿರುಕುಳ ಆರೋಪ : ಹರಿಯಾಣದ ಕ್ರೀಡಾ ಸಚಿವ ರಾಜೀನಾಮೆ

ಚಂಡೀಗಡ: ಶುಕ್ರವಾರ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಚಂಡೀಗಢ ಪೊಲೀಸರು ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ಮೇಲಿನ ಆರೋಪಗಳನ್ನು ‘ತಮ್ಮ ಇಮೇಜ್ ಹಾಳು ಮಾಡುವ’ ಪ್ರಯತ್ನ ಎಂದು ತಳ್ಳಿಹಾಕಿದ್ದಾರೆ. … Continued