ಮಹದಾಯಿ ಕಾಮಗಾರಿಗೆ 2 ತಿಂಗಳಲ್ಲಿ ಶಂಕುಸ್ಥಾಪನೆ : ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದ ಅರಣ್ಯ ಇಲಾಖೆಯ ಒಪ್ಪಿಗೆ ಪಡೆದು, ಎರಡು ತಿಂಗಳಲ್ಲಿ ಮಹದಾಯಿ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಪರಿಷ್ಕೃತ ಡಿಪಿಆರ್‌ಗೆ ಒಪ್ಪಿಗೆ ನೀಡಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಪರಿಸರ ಇಲಾಖೆಯ ಅನುಮತಿ ಅಗತ್ಯವಿಲ್ಲ. 60 ಎಕರೆ ಭೂಮಿ ಅಗತ್ಯವಾಗಿರುವುದರಿಂದ ಅದಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಬೇಕಿದೆ ಎಂದರು.
ಡಿಪಿಆರ್‌ಗೆ ದಿನಾಂಕವಿಲ್ಲ ಎಂದು ಆರೋಪಿಸಿರುವ ಶಾಸಕ ಎಚ್‌.ಕೆ. ಪಾಟೀಲ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ ಮುಖಂಡ ಎಚ್.ಕೆ. ಪಾಟೀಲರು ರಾಜಕೀಯವಾಗಿ ಔಟ್‌ಡೇಟೆಡ್‌ ಆಗಿದ್ದಾರೆ. ಅದಕ್ಕಾಗಿ ಅವರು ದಿನಾಂಕದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷವು ರಾಜಕೀಯವಾಗಿ ಔಟ್‌ಡೇಟೆಡ್‌ ಆಗಿದೆ. ಡಿಸೆಂಬರ್‌ 29ರಂದು ಆದೇಶವಾದ ದಿನಾಂಕ ಡಿಪಿಆರ್‌ನಲ್ಲಿದೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement