2022 : ಕಾಶ್ಮೀರದಲ್ಲಿ 42 ವಿದೇಶಿ ಉಗ್ರರು ಸೇರಿ 172 ಭಯೋತ್ಪಾದಕರ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ 2022ರಲ್ಲಿ ಭದ್ರತಾ ಪಡೆಗಳು ನಡೆಸಿದ 42 ವಿದೇಶಿ ಭಯೋತ್ಪಾದಕರೂ ಸೇರಿದಂತೆ 172 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಭಾಗದಲ್ಲಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗುವವರ ಸಂಖ್ಯೆಯಲ್ಲಿ ಶೇ 37ರಷ್ಟು ಇಳಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “2022ರಲ್ಲಿ ಕಾಶ್ಮೀರದಲ್ಲಿ ಒಟ್ಟು 93 ಯಶಸ್ವಿ ಎನ್‌ಕೌಂಟರ್‌ಗಳು ನಡೆದಿವೆ. ಅವುಗಳಲ್ಲಿ 42 ವಿದೇಶಿ ಉಗ್ರರು ಸೇರಿದಂತೆ ಒಟ್ಟು 172 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ವಿಜಯಕುಮಾರ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ಭದ್ರತಾ ಪಡೆಗಳಿಂದ ಸತ್ತವರಲ್ಲಿ 108 ಉಗ್ರರು ಎಲ್‌ಇಟಿ ಅಥವಾ ಅದರ ಉಪ ಘಟಕ ರೆಸಿಸ್ಟನ್ಸ್ ಫ್ರಂಟ್‌ಗೆ ಸೇರಿದವರಾಗಿದ್ದಾರೆ. 35 ಉಗ್ರರು ಜೈಶ್ ಎ ಮುಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರಾಗಿದ್ದಾರೆ. 22 ಮಂದಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ), 4 ಉಗ್ರರು ಅಲ್ ಬದರ್ ಮತ್ತು ಮೂವರು ಅನ್ಸರ್ ಘಾಜವತ್ ಉಲ್ ಹಿಂದ್ (ಎಜಿಯುಎಚ್) ಸಂಘಟನೆಗೆ ಸೇರಿದ ಭಯೋತ್ಪಾದಕರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದೇವೇಳೆ 14 ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿದಂತೆ 26 ಭದ್ರತಾ ಪಡೆಗಳ ಸಿಬ್ಬಂದಿ ಕೂಡ 2022ರಲ್ಲಿ ಭಯೋತ್ಪಾದನಾ ದಾಳಿ ಹಾಗೂ ಎನ್‌ಕೌಂಟರ್‌ಗಳಲ್ಲಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement