ನಡೆದಾಡುವ ದೇವರು ಖ್ಯಾತಿಯ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ವಿಧಿವಶರಾಗಿದ್ದಾರೆ. ಇಂದು ಸೋಮವಾರ ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಶ್ರಮದ ಕೊಠಡಿಯಲ್ಲೇ ಚಿಕಿತ್ಸೆ ನಡೆದಿತ್ತು. ಜಿಲ್ಲಾಧಿಕಾರಿ ಡಾ. ವಿಜಯ ಮಾಂತೇಶ ದಾನಮನ್ನವರ, ಎಸ್ಪಿ ಎಚ್. ಡಿ.ಆನಂದ್ ಕುಮಾರ್ ಹಾಗೂ ಹಲವು ಮಠಾಧೀಶರು … Continued

ಟೆನಿಸ್ ದಂತಕಥೆ ಮಾರ್ಟಿನಾ ನವ್ರಾಟಿಲೋವಾಗೆ ಗಂಟಲು-ಸ್ತನ ಕ್ಯಾನ್ಸರ್ ಪತ್ತೆ

ಟೆನಿಸ್ ದಂತಕಥೆ ಮಾರ್ಟಿನಾ ನವ್ರಾಟಿಲೋವಾ ಅವರಿಗೆ ಗಂಟಲು ಮತ್ತು ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಟೆನಿಸ್ ದಂತಕಥೆ ಮಾರ್ಟಿನಾ ನವ್ರಾಟಿಲೋವಾ ಅವರು ಸ್ತನ ಮತ್ತು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿರುವುದಾಗಿ ಸೋಮವಾರ ಬಹಿರಂಗಪಡಿಸಿದ್ದಾರೆ.18 ಬಾರಿಯ ಗ್ರ್ಯಾಂಡ್ ಸ್ಲಾಮ್ ಸಿಂಗಲ್ಸ್ ಚಾಂಪಿಯನ್ ನವ್ರಾಟಿಲೋವಾ ಅವರಿಗೆ ಜನವರಿಯಲ್ಲಿ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಆರಂಭವಾಗಲಿದೆ, ಅವರು ತಾನು ರೋಗದ ವಿರುದ್ಧ ಹೋರಾಡಲು ಸಿದ್ಧವಾಗಿದ್ದೇನೆ … Continued

‘ವೀರ ಕಂಬಳ’ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌

ಖ್ಯಾತ ನಿರ್ದೇಶಕ ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತುಳುನಾಡಿನ ಸುಪ್ರಸಿದ್ಧ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ ಎಂದು ಫಿಲ್ಮ್‌ಬೀಟ್‌. ಕಾಮ್‌ ವರದಿ ಮಾಡಿದೆ. ‘ವೀರ ಕಂಬಳ’ ಸಿನಿಮಾ ಸಿನೆಮಾ … Continued

ಚಲಿಸುತ್ತಿರುವ ಕಾರಿನ ಗಾಜಿನ ಮೇಲೆ ಬೃಹತ್‌ ಹೆಬ್ಬಾವಿನ ಹರಿದಾಟ : ಗಾಬರಿ ತರಿಸುವ ದೃಶ್ಯಾವಳಿ | ವೀಕ್ಷಿಸಿ

ಚಲಿಸುತ್ತಿರುವ ಕಾರಿನ ಬಾನೆಟ್‌ನಿಂದ ಬೃಹತ್ ಹೆಬ್ಬಾವು ಹೊರಬರುತ್ತಿರುವುದನ್ನು ತೋರಿಸುವ ಭಯಾನಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಡಿಸೆಂಬರ್ 27 ರಂದು ದಕ್ಷಿಣ ಥೈಲ್ಯಾಂಡ್‌ನ ಕ್ರಾಬಿಯಲ್ಲಿ ರಾತ್ರಿ ಚಾಲನೆ ಮಾಡುವಾಗ ವೀಡಿಯೊವನ್ನು ಸೆರೆಹಿಡಿಯಲಾಗಿದೆ. 27-ಸೆಕೆಂಡ್ ಕ್ಲಿಪ್ ಕಾರಿನ ವಿಂಡ್‌ ಸ್ಕ್ರೀನ್‌ನ ಮುಂದೆ ಹೆಬ್ಬಾವು ತನ್ನ ತಲೆಯನ್ನು ಮತ್ತು ಅರ್ಧ ದೇಹವನ್ನು ಮೇಲಕ್ಕೆತ್ತಿರುವುದನ್ನು ತೋರಿಸುತ್ತದೆ. ದೈತ್ಯ ಸರೀಸೃಪವು ಗೊಂದಲದಲ್ಲಿರುವಂತೆ … Continued

ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued

ಡೆತ್ ನೋಟ್ ಪ್ರಕರಣ: ಕಾನೂನು ಪ್ರಕಾರ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಉದ್ಯಮಿ ಪ್ರದೀಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರದೀಪ (47) ಡೆತ್ ನೋಟ್ ಬರೆದಿಟ್ಟು ಪ್ರದೀಪ ಅವರು ಬೆಂಗಳೂರು ದಕ್ಷಿಣದ ನೆಟ್ಟಿಗೆರೆ ಬಳಿ ಭಾನುವಾರ ಸಂಜೆ ತಲೆಗೆ ಗುಂಡು ಹಾರಿಸಿಕೊಂಡು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು … Continued

ರೈತನ ಮೇಲೆ ಆನೆ ದಾಳಿ: ಗಂಭೀರ ಗಾಯ

ಚಾಮರಾಜನಗರ : ಜಮೀನಿನಲ್ಲಿ ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ತೀವ್ರವಾಗಿ ಗಾಯಗೊಂಡ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. . ರೈತನ ಚೀರಾಟ ಮತ್ತು ಕೂಗಾಟ … Continued

ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ … Continued

ಪಂಜಾಬ್ ಸಿಎಂ ಭಗವಂತ್ ಮಾನ್ ಮನೆ ಬಳಿ ಬಾಂಬ್ ಪತ್ತೆ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಇಂದು, ಸೋಮವಾರ ಸ್ಫೋಟಕ ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಪಂಜಾಬ್ ಮುಖ್ಯಮಂತ್ರಿ ಬಳಸುತ್ತಿದ್ದ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ತಕ್ಷಣವೇ ರವಾನಿಸಲಾಯಿತು. ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ಅನ್ನು ಕೂಡ ತನಿಖೆಗಾಗಿ ಲೂಪ್ ಮಾಡಲಾಗಿದೆ. ಇಂದು ಸೋಮವಾರ ಸಂಜೆ … Continued

ಮ್ಯಾಕ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‍ಗೆ ಕ್ರಿಕೆಟಿಗ ರಿಷಭ್ ಪಂತ್ ಸ್ಥಳಾಂತರ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತದ ವಿಕೆಟ್ ಕೀಪರ್ ರಿಷಭ ಪಂತ್‍ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದ್ದು, ಅವರನ್ನು ಮ್ಯಾಕ್ಸ್ ಆಸ್ಪತ್ರೆಯ ಸುಸಜ್ಜಿತ ಖಾಸಗಿ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಡಿಡಿಸಿಎ ನಿರ್ದೇಶಕ ಶ್ಯಾಂ ಶರ್ಮಾ ಅವರು ರಿಷಭ್ ಪಂತ್‍ ಅವರ ಆರೋಗ್ಯದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, `ಡಿಸೆಂಬರ್ 30ರಂದು ಕಾರಿನ … Continued