ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.
ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ ದೇಶದ ಜನರ ರಕ್ಷಣೆ ಮಾಡುವ ಕೆಲಸ ಮಾಡಿದರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಶಿಕ್ಷಣ ಕ್ಷೇತ್ರದ ಸುಧಾರಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ, ಶಾಲಾ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಕೋಟ್ಯಂತರ ರೂ.ಗಳಷ್ಟು ಹಣವನ್ನು ರಾಜ್ಯ ಸರ್ಕಾರ ಖರ್ಚು ಮಾಡುತ್ತಿದೆ ಎಂದರು. ಶಿಕ್ಷಕರ ಪರಿಶ್ರಮ ಹಾಗೂ ಆಡಳಿತ ಮಂಡಳಿಯ ಕಾರ್ಯವನ್ನು ಶ್ಲಾಘಸಿದರು
ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿಗೆ ಜಾಗ ನೀಡಿದ್ದ ವ್ಯಾಸರಾಯ ಕುಟುಂಬವನ್ನು ಹಾಗೂ ಶಾಲೆಯ ನಿವೃತ್ತ ಶಿಕ್ಷಕರನ್ನು ಶಾಸಕ ದಿನಕರ ಶೆಟ್ಟಿ ಶಾಲು ಹೊದೆಸಿ ಸನ್ಮಾನಿಸಿದರು. ವೇದಿಕೆಯಲ್ಲಿ ಶಿಕ್ಷಣಾಧಿಕಾರಿ ಆರ್. ಎಲ್. ಭಟ್ಟ ಉಪಸ್ಥಿತರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement